ಮಾರ್ಕನು 3 : 1 (IRVKN)
ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ * ಸೊರಗಿಹೋದ ಕೈ, ದುರ್ಬಲವಾದ, ಬಲಹೀನವಾದದ್ದು, ಕಳೆಗುಂದು. ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
ಮಾರ್ಕನು 3 : 2 (IRVKN)
ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
ಮಾರ್ಕನು 3 : 3 (IRVKN)
ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.
ಮಾರ್ಕನು 3 : 4 (IRVKN)
ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
ಮಾರ್ಕನು 3 : 5 (IRVKN)
ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
ಮಾರ್ಕನು 3 : 6 (IRVKN)
ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
ಮಾರ್ಕನು 3 : 7 (IRVKN)
ಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದು
ಮತ್ತಾ 10:1-4; ಲೂಕ 6:12-19 ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
ಮಾರ್ಕನು 3 : 8 (IRVKN)
ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
ಮಾರ್ಕನು 3 : 9 (IRVKN)
ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
ಮಾರ್ಕನು 3 : 10 (IRVKN)
ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
ಮಾರ್ಕನು 3 : 11 (IRVKN)
[† ಮಾರ್ಕ 1:26-34; ಲೂಕ 4: 41 ]ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು ‡ ಮತ್ತಾ 14:33: “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
ಮಾರ್ಕನು 3 : 12 (IRVKN)
ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
ಮಾರ್ಕನು 3 : 13 (IRVKN)
ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
ಮಾರ್ಕನು 3 : 14 (IRVKN)
ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
ಮಾರ್ಕನು 3 : 15 (IRVKN)
ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
ಮಾರ್ಕನು 3 : 16 (IRVKN)
ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: § ಅ. ಕೃ. 1:13: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
ಮಾರ್ಕನು 3 : 17 (IRVKN)
ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
ಮಾರ್ಕನು 3 : 18 (IRVKN)
ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
ಮಾರ್ಕನು 3 : 19 (IRVKN)
ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
ಮಾರ್ಕನು 3 : 20 (IRVKN)
ಯೇಸುವು ಮತ್ತು ಬೆಲ್ಜೆಬೂಲನು
ಮತ್ತಾ 12:22-32,46-50; ಲೂಕ 11:14-22; 8:19-21 ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
ಮಾರ್ಕನು 3 : 21 (IRVKN)
ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
ಮಾರ್ಕನು 3 : 22 (IRVKN)
ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
ಮಾರ್ಕನು 3 : 23 (IRVKN)
ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
ಮಾರ್ಕನು 3 : 24 (IRVKN)
ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;
ಮಾರ್ಕನು 3 : 25 (IRVKN)
ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.
ಮಾರ್ಕನು 3 : 26 (IRVKN)
ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
ಮಾರ್ಕನು 3 : 27 (IRVKN)
ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
ಮಾರ್ಕನು 3 : 28 (IRVKN)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
ಮಾರ್ಕನು 3 : 29 (IRVKN)
ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
ಮಾರ್ಕನು 3 : 30 (IRVKN)
ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
ಮಾರ್ಕನು 3 : 31 (IRVKN)
ಯೇಸುವಿನ ತಾಯಿ ಹಾಗೂ ಸಹೋದರರು ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
ಮಾರ್ಕನು 3 : 32 (IRVKN)
ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ * ಮೂಲ ಭಾಷೆಯ ಕೆಲವು ಹಸ್ತಪ್ರತಿಗಳಲ್ಲಿ ಸಹೋದರರು ಮತ್ತು ಸಹೋದರಿಯರು ಎಂದು ಬರೆಯಲಾಗಿದೆ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
ಮಾರ್ಕನು 3 : 33 (IRVKN)
ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
ಮಾರ್ಕನು 3 : 34 (IRVKN)
“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
ಮಾರ್ಕನು 3 : 35 (IRVKN)
ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35