ಮಾರ್ಕನು 4 : 1 (IRVKN)
ಬಿತ್ತುವವನ ಸಾಮ್ಯ* ಸಾಮ್ಯ - ದೇವರ ರಾಜ್ಯದ ಅಥವಾ ಆತ್ಮೀಕ ವಿಷಯಗಳ ಅರ್ಥವನ್ನು ಪ್ರತಿದಿನ ಬಳಸುವ ವಸ್ತುಗಳ ಮೂಲಕ ನೀತಿಯನ್ನು ವಿವರಿಸುವುದು.
ಮತ್ತಾ 13:1-34; ಲೂಕ 8:4-18; 13:18,19 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
ಮಾರ್ಕನು 4 : 2 (IRVKN)
ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:
ಮಾರ್ಕನು 4 : 3 (IRVKN)
“ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.
ಮಾರ್ಕನು 4 : 4 (IRVKN)
ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
ಮಾರ್ಕನು 4 : 5 (IRVKN)
ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;
ಮಾರ್ಕನು 4 : 6 (IRVKN)
ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.
ಮಾರ್ಕನು 4 : 7 (IRVKN)
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
ಮಾರ್ಕನು 4 : 8 (IRVKN)
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
ಮಾರ್ಕನು 4 : 9 (IRVKN)
ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
ಮಾರ್ಕನು 4 : 10 (IRVKN)
ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
ಮಾರ್ಕನು 4 : 11 (IRVKN)
ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”
ಮಾರ್ಕನು 4 : 12 (IRVKN)
† ಯೆಶಾ 6:9, 10: “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”
ಮಾರ್ಕನು 4 : 13 (IRVKN)
ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?
ಮಾರ್ಕನು 4 : 14 (IRVKN)
ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.
ಮಾರ್ಕನು 4 : 15 (IRVKN)
ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
ಮಾರ್ಕನು 4 : 16 (IRVKN)
“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;
ಮಾರ್ಕನು 4 : 17 (IRVKN)
ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
ಮಾರ್ಕನು 4 : 18 (IRVKN)
“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;
ಮಾರ್ಕನು 4 : 19 (IRVKN)
ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.
ಮಾರ್ಕನು 4 : 20 (IRVKN)
ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
ಮಾರ್ಕನು 4 : 21 (IRVKN)
ದೀಪಸ್ತಂಭದ ಸಾಮ್ಯ ಇದಲ್ಲದೆ ಯೇಸು ಅವರಿಗೆ, ‡ ಮತ್ತಾ 5:15; ಲೂಕ 8:16; 11:33: “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
ಮಾರ್ಕನು 4 : 22 (IRVKN)
ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ;§ ಮತ್ತಾ 10:26; ಲೂಕ 8:17; 12:2: ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.
ಮಾರ್ಕನು 4 : 23 (IRVKN)
[* ಮಾರ್ಕ 4:9; ಮತ್ತಾ 11:15; ಪ್ರಕ 2:7,11,17,29; 3:6,13, 22 ]ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.
ಮಾರ್ಕನು 4 : 24 (IRVKN)
ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ.† ಮತ್ತಾ 7:2; ಲೂಕ 6:38: ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.
ಮಾರ್ಕನು 4 : 25 (IRVKN)
‡ ಮತ್ತಾ 25:29; ಲೂಕ 8:18; 19:26: ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.
ಮಾರ್ಕನು 4 : 26 (IRVKN)
ಬೆಳೆಯುವ ಬೀಜದ ಸಾಮ್ಯ ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
ಮಾರ್ಕನು 4 : 27 (IRVKN)
ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
ಮಾರ್ಕನು 4 : 28 (IRVKN)
ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.
ಮಾರ್ಕನು 4 : 29 (IRVKN)
ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.
ಮಾರ್ಕನು 4 : 30 (IRVKN)
ಸಾಸಿವೆಕಾಳಿನ ಸಾಮ್ಯ ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
ಮಾರ್ಕನು 4 : 31 (IRVKN)
ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
ಮಾರ್ಕನು 4 : 32 (IRVKN)
ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.
ಮಾರ್ಕನು 4 : 33 (IRVKN)
ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
ಮಾರ್ಕನು 4 : 34 (IRVKN)
ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.
ಮಾರ್ಕನು 4 : 35 (IRVKN)
ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು
ಮತ್ತಾ 8:23-27; ಲೂಕ 8:22-25 ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
ಮಾರ್ಕನು 4 : 36 (IRVKN)
ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
ಮಾರ್ಕನು 4 : 37 (IRVKN)
ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
ಮಾರ್ಕನು 4 : 38 (IRVKN)
ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
ಮಾರ್ಕನು 4 : 39 (IRVKN)
ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
ಮಾರ್ಕನು 4 : 40 (IRVKN)
ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು
ಮಾರ್ಕನು 4 : 41 (IRVKN)
ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41