ಮಾರ್ಕನು 5 : 1 (IRVKN)
ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
ಮತ್ತಾ 8:28-34; ಲೂಕ 8:26-39 ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
ಮಾರ್ಕನು 5 : 2 (IRVKN)
ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
ಮಾರ್ಕನು 5 : 3 (IRVKN)
(3-4)ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
ಮಾರ್ಕನು 5 : 5 (IRVKN)
ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
ಮಾರ್ಕನು 5 : 6 (IRVKN)
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,
ಮಾರ್ಕನು 5 : 7 (IRVKN)
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, [* ಲೂಕ 1:32; 6:35; ಅ. ಕೃ. 16: 17 ಪರಾತ್ಪರನಾದ ]ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ † ನನ್ನ ವಿಷಯಗಳು ನಿನಗೆ ಯಾಕೆ ಬೇಕು. ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
ಮಾರ್ಕನು 5 : 8 (IRVKN)
ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.
ಮಾರ್ಕನು 5 : 9 (IRVKN)
ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ‡ ಅಂದರೆ 6,000 ಸೈನಿಕರುಳ್ಳ ಸೈನ್ಯದಳ. ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,
ಮಾರ್ಕನು 5 : 10 (IRVKN)
ನಮ್ಮನ್ನು ಈ ಪ್ರಾಂತ್ಯದಿಂದ§ ಸೀಮೆಯಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
ಮಾರ್ಕನು 5 : 11 (IRVKN)
ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು* ಅಂದರೆ ಪ್ರಾಣಿಗಳ ಗುಂಪು. ಮೇಯುತ್ತಿತ್ತು.
ಮಾರ್ಕನು 5 : 12 (IRVKN)
ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.
ಮಾರ್ಕನು 5 : 13 (IRVKN)
ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
ಮಾರ್ಕನು 5 : 14 (IRVKN)
ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
ಮಾರ್ಕನು 5 : 15 (IRVKN)
ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
ಮಾರ್ಕನು 5 : 16 (IRVKN)
ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
ಮಾರ್ಕನು 5 : 17 (IRVKN)
ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಮಾರ್ಕನು 5 : 18 (IRVKN)
ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
ಮಾರ್ಕನು 5 : 19 (IRVKN)
ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
ಮಾರ್ಕನು 5 : 20 (IRVKN)
† ಮಾರ್ಕ 1:45 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
ಮಾರ್ಕನು 5 : 21 (IRVKN)
ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ
ಮತ್ತಾ 9:18-26; ಲೂಕ 8:40-56 ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
ಮಾರ್ಕನು 5 : 22 (IRVKN)
ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,
ಮಾರ್ಕನು 5 : 23 (IRVKN)
“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
ಮಾರ್ಕನು 5 : 24 (IRVKN)
ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
ಮಾರ್ಕನು 5 : 25 (IRVKN)
ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.
ಮಾರ್ಕನು 5 : 26 (IRVKN)
ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
ಮಾರ್ಕನು 5 : 27 (IRVKN)
(27-28)ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
ಮಾರ್ಕನು 5 : 29 (IRVKN)
ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
ಮಾರ್ಕನು 5 : 30 (IRVKN)
ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು
ಮಾರ್ಕನು 5 : 31 (IRVKN)
ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
ಮಾರ್ಕನು 5 : 32 (IRVKN)
ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
ಮಾರ್ಕನು 5 : 33 (IRVKN)
ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
ಮಾರ್ಕನು 5 : 34 (IRVKN)
ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.
ಮಾರ್ಕನು 5 : 36 (IRVKN)
ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು. ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
ಮಾರ್ಕನು 5 : 37 (IRVKN)
ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
ಮಾರ್ಕನು 5 : 38 (IRVKN)
ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
ಮಾರ್ಕನು 5 : 39 (IRVKN)
ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,
ಮಾರ್ಕನು 5 : 40 (IRVKN)
ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
ಮಾರ್ಕನು 5 : 41 (IRVKN)
ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ ‡ ಚಿಕ್ಕ ಹುಡುಗಿ ಎಂದು ಅರ್ಥ. “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
ಮಾರ್ಕನು 5 : 42 (IRVKN)
ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
ಮಾರ್ಕನು 5 : 43 (IRVKN)
§ ಮಾರ್ಕ 2:12; ಲೂಕ 2:47: ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43