ಮಾರ್ಕನು 7 : 1 (IRVKN)
{ಶುದ್ಧ ಹಾಗೂ ಅಶುದ್ಧ} (ಮತ್ತಾ 15:1-20) [PS] ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
ಮಾರ್ಕನು 7 : 2 (IRVKN)
ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
ಮಾರ್ಕನು 7 : 3 (IRVKN)
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
ಮಾರ್ಕನು 7 : 4 (IRVKN)
ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು [* ಕೆಲವು ಪ್ರತಿಗಳಲ್ಲಿ ಸ್ನಾನಮಾಡು ಎಂದು ಬರೆದಿದೆ. ] ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
ಮಾರ್ಕನು 7 : 5 (IRVKN)
ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
ಮಾರ್ಕನು 7 : 6 (IRVKN)
ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: [QBR] [† ಯೆಶಾ 29:13] “ ‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, [QBR2] ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ. [QBR]
ಮಾರ್ಕನು 7 : 7 (IRVKN)
ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ [QBR2] ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
ಮಾರ್ಕನು 7 : 8 (IRVKN)
ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
ಮಾರ್ಕನು 7 : 9 (IRVKN)
ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ [‡ ಲೂಕ 7:30; ಯೋಹಾ 12:48:] ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
ಮಾರ್ಕನು 7 : 10 (IRVKN)
‘ನಿನ್ನ [§ ವಿಮೋ 20:12:] ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು [* ವಿಮೋ 21:17:] ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
ಮಾರ್ಕನು 7 : 11 (IRVKN)
ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
ಮಾರ್ಕನು 7 : 12 (IRVKN)
ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
ಮಾರ್ಕನು 7 : 13 (IRVKN)
ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು. [PE][PS]
ಮಾರ್ಕನು 7 : 14 (IRVKN)
ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
ಮಾರ್ಕನು 7 : 15 (IRVKN)
ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
ಮಾರ್ಕನು 7 : 16 (IRVKN)
“ [† 16 ನೆಯ ವಚನವು ಮೂಲಗ್ರಂಥದ ಹೆಚ್ಚು ಪ್ರತಿಗಳಲ್ಲಿ ಇಲ್ಲ. ] ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು. [PE][PS]
ಮಾರ್ಕನು 7 : 17 (IRVKN)
ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
ಮಾರ್ಕನು 7 : 18 (IRVKN)
ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
ಮಾರ್ಕನು 7 : 19 (IRVKN)
ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
ಮಾರ್ಕನು 7 : 20 (IRVKN)
ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
ಮಾರ್ಕನು 7 : 21 (IRVKN)
ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
ಮಾರ್ಕನು 7 : 22 (IRVKN)
ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
ಮಾರ್ಕನು 7 : 23 (IRVKN)
ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.” [PS]
ಮಾರ್ಕನು 7 : 24 (IRVKN)
{ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು} (ಮತ್ತಾ 15:21-28) [PS] ಯೇಸು ಅಲ್ಲಿಂದ ಹೊರಟು [‡ ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ] ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
ಮಾರ್ಕನು 7 : 25 (IRVKN)
ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
ಮಾರ್ಕನು 7 : 26 (IRVKN)
ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
ಮಾರ್ಕನು 7 : 27 (IRVKN)
ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
ಮಾರ್ಕನು 7 : 28 (IRVKN)
ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
ಮಾರ್ಕನು 7 : 29 (IRVKN)
ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
ಮಾರ್ಕನು 7 : 30 (IRVKN)
ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು. [PS]
ಮಾರ್ಕನು 7 : 31 (IRVKN)
{ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು} [PS] ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
ಮಾರ್ಕನು 7 : 32 (IRVKN)
ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
ಮಾರ್ಕನು 7 : 33 (IRVKN)
ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
ಮಾರ್ಕನು 7 : 34 (IRVKN)
ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
ಮಾರ್ಕನು 7 : 35 (IRVKN)
ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
ಮಾರ್ಕನು 7 : 36 (IRVKN)
ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
ಮಾರ್ಕನು 7 : 37 (IRVKN)
[§ ಮಾರ್ಕ 6:51; 10:26; ಮತ್ತಾ 15:30, 31:] ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37

BG:

Opacity:

Color:


Size:


Font: