ಮಾರ್ಕನು 8 : 1 (IRVKN)
{ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು} (ಮತ್ತಾ 15:32-39) [PS] ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
ಮಾರ್ಕನು 8 : 2 (IRVKN)
“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
ಮಾರ್ಕನು 8 : 3 (IRVKN)
ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
ಮಾರ್ಕನು 8 : 4 (IRVKN)
ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
ಮಾರ್ಕನು 8 : 5 (IRVKN)
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
ಮಾರ್ಕನು 8 : 6 (IRVKN)
ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
ಮಾರ್ಕನು 8 : 7 (IRVKN)
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
ಮಾರ್ಕನು 8 : 8 (IRVKN)
ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
ಮಾರ್ಕನು 8 : 9 (IRVKN)
ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
ಮಾರ್ಕನು 8 : 10 (IRVKN)
ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. [PS]
ಮಾರ್ಕನು 8 : 11 (IRVKN)
{ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು} (ಮತ್ತಾ 16:1-12; ಲೂಕ 11:16; 12:1; ಯೋಹಾ 6:30) [PS] ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
ಮಾರ್ಕನು 8 : 12 (IRVKN)
ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
ಮಾರ್ಕನು 8 : 13 (IRVKN)
ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು. [PE][PS]
ಮಾರ್ಕನು 8 : 14 (IRVKN)
ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
ಮಾರ್ಕನು 8 : 15 (IRVKN)
ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
ಮಾರ್ಕನು 8 : 16 (IRVKN)
ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
ಮಾರ್ಕನು 8 : 17 (IRVKN)
ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
ಮಾರ್ಕನು 8 : 18 (IRVKN)
ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
ಮಾರ್ಕನು 8 : 19 (IRVKN)
ನಾನು [* ಮಾರ್ಕ 6:41,43,44 ] ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
ಮಾರ್ಕನು 8 : 20 (IRVKN)
“ಮತ್ತು [† ಮಾರ್ಕ 8:6, 8, 9:] ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
ಮಾರ್ಕನು 8 : 21 (IRVKN)
ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು. [PS]
ಮಾರ್ಕನು 8 : 22 (IRVKN)
{ಯೇಸು ಕುರುಡನಿಗೆ ಕಣ್ಣುಕೊಟ್ಟದ್ದು} [PS] ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
ಮಾರ್ಕನು 8 : 23 (IRVKN)
[‡ ಮಾರ್ಕ 7:33; ಮತ್ತಾ 20:34; ಯೋಹಾ 9:6:] ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
ಮಾರ್ಕನು 8 : 24 (IRVKN)
ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
ಮಾರ್ಕನು 8 : 25 (IRVKN)
ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
ಮಾರ್ಕನು 8 : 26 (IRVKN)
ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. [PS]
ಮಾರ್ಕನು 8 : 27 (IRVKN)
{ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡದ್ದು} (ಮತ್ತಾ 16:13-28; ಲೂಕ 9:18-27) [PS] ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
ಮಾರ್ಕನು 8 : 28 (IRVKN)
ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
ಮಾರ್ಕನು 8 : 29 (IRVKN)
ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
ಮಾರ್ಕನು 8 : 30 (IRVKN)
ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. [PS]
ಮಾರ್ಕನು 8 : 31 (IRVKN)
{ಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದು} [PS] ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು [§ ಹೋಶೇ. 6:2:] ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
ಮಾರ್ಕನು 8 : 32 (IRVKN)
ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
ಮಾರ್ಕನು 8 : 33 (IRVKN)
ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, [* ಮತ್ತಾ 4:10:] “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. [PE][PS]
ಮಾರ್ಕನು 8 : 34 (IRVKN)
ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಮಾರ್ಕನು 8 : 35 (IRVKN)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
ಮಾರ್ಕನು 8 : 36 (IRVKN)
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
ಮಾರ್ಕನು 8 : 37 (IRVKN)
ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
ಮಾರ್ಕನು 8 : 38 (IRVKN)
ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: