ಮಾರ್ಕನು 9 : 1 (IRVKN)
ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು. [PS]
ಮಾರ್ಕನು 9 : 2 (IRVKN)
{ಯೇಸುವಿನ ರೂಪಾಂತರ} (ಮತ್ತಾ 17:1-13; ಲೂಕ 9:28-36) [PS] ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
ಮಾರ್ಕನು 9 : 3 (IRVKN)
ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
ಮಾರ್ಕನು 9 : 4 (IRVKN)
ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
ಮಾರ್ಕನು 9 : 5 (IRVKN)
ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು [* ಪರ್ಣಶಾಲೆ, ಮನೆಯನ್ನು. ] ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
ಮಾರ್ಕನು 9 : 6 (IRVKN)
ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
ಮಾರ್ಕನು 9 : 7 (IRVKN)
[† ಮಾರ್ಕ 1:11; ಮತ್ತಾ 3:17:] ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
ಮಾರ್ಕನು 9 : 8 (IRVKN)
ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. [PE][PS]
ಮಾರ್ಕನು 9 : 9 (IRVKN)
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
ಮಾರ್ಕನು 9 : 10 (IRVKN)
ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಮಾರ್ಕನು 9 : 11 (IRVKN)
ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
ಮಾರ್ಕನು 9 : 12 (IRVKN)
ಅದಕ್ಕೆ [‡ ಮಲಾ. 4:5, 6; ಕೀರ್ತ 22:6; ಯೆಶಾ 53:2, 3; ದಾನಿ. 9:26; ಜೆಕ. 13:7:] ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
ಮಾರ್ಕನು 9 : 13 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. [PS]
ಮಾರ್ಕನು 9 : 14 (IRVKN)
{ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು} (ಮತ್ತಾ 17:14-21; ಲೂಕ 9:3-42) [PS] ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
ಮಾರ್ಕನು 9 : 15 (IRVKN)
ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
ಮಾರ್ಕನು 9 : 16 (IRVKN)
ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
ಮಾರ್ಕನು 9 : 17 (IRVKN)
ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
ಮಾರ್ಕನು 9 : 18 (IRVKN)
ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
ಮಾರ್ಕನು 9 : 19 (IRVKN)
ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
ಮಾರ್ಕನು 9 : 20 (IRVKN)
ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
ಮಾರ್ಕನು 9 : 21 (IRVKN)
ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
ಮಾರ್ಕನು 9 : 22 (IRVKN)
ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
ಮಾರ್ಕನು 9 : 23 (IRVKN)
ಯೇಸು ಅವನಿಗೆ, “ ‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
ಮಾರ್ಕನು 9 : 24 (IRVKN)
ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
ಮಾರ್ಕನು 9 : 25 (IRVKN)
ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
ಮಾರ್ಕನು 9 : 26 (IRVKN)
ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
ಮಾರ್ಕನು 9 : 27 (IRVKN)
ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು. [PE][PS]
ಮಾರ್ಕನು 9 : 28 (IRVKN)
ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
ಮಾರ್ಕನು 9 : 29 (IRVKN)
ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ [§ ಕೆಲವು ಮೂಲಪ್ರತಿಗಳಲ್ಲಿ ಉಪವಾಸ ಹಾಗೂ ಪ್ರಾರ್ಥನೆಯಿಂದ ಎಂದು ಬರೆಯಲಾಗಿದೆ. ] ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು. [PS]
ಮಾರ್ಕನು 9 : 30 (IRVKN)
{ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು} (ಮತ್ತಾ 17:22-23; ಲೂಕ 9:43-45) [PS] ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
ಮಾರ್ಕನು 9 : 31 (IRVKN)
[* ಹೋಶೇ. 6:2:] ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
ಮಾರ್ಕನು 9 : 32 (IRVKN)
ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು. [PS]
ಮಾರ್ಕನು 9 : 33 (IRVKN)
{ಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದು} (ಮತ್ತಾ 18:1-9; ಲೂಕ 9:46-50) [PS] ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
ಮಾರ್ಕನು 9 : 34 (IRVKN)
ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
ಮಾರ್ಕನು 9 : 35 (IRVKN)
ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
ಮಾರ್ಕನು 9 : 36 (IRVKN)
ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
ಮಾರ್ಕನು 9 : 37 (IRVKN)
“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. [PS]
ಮಾರ್ಕನು 9 : 38 (IRVKN)
{ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ} [PS] ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
ಮಾರ್ಕನು 9 : 39 (IRVKN)
ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
ಮಾರ್ಕನು 9 : 40 (IRVKN)
ನಮಗೆ [† ಮತ್ತಾ 12:30. ] ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
ಮಾರ್ಕನು 9 : 41 (IRVKN)
ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ [‡ ಮತ್ತಾ 10:42:] ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ. [PS]
ಮಾರ್ಕನು 9 : 42 (IRVKN)
{ಪಾಪಕ್ಕೆ ಪ್ರೇರಣೆ} [PS] ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
ಮಾರ್ಕನು 9 : 43 (IRVKN)
[43-44] ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ [§ 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ. ] ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
ಮಾರ್ಕನು 9 : 44 (IRVKN)
[NIL]
ಮಾರ್ಕನು 9 : 45 (IRVKN)
[45-46] ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
ಮಾರ್ಕನು 9 : 46 (IRVKN)
[NIL]
ಮಾರ್ಕನು 9 : 47 (IRVKN)
ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.
ಮಾರ್ಕನು 9 : 48 (IRVKN)
ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ. [PE][PS]
ಮಾರ್ಕನು 9 : 49 (IRVKN)
“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
ಮಾರ್ಕನು 9 : 50 (IRVKN)
ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ [* ಉಪ್ಪಿನಂತೆ ಒಬ್ಬರಿಗೊಬ್ಬರು ಒಳ್ಳೆಯದನ್ನು ಮಾಡಿರಿ. ] ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50

BG:

Opacity:

Color:


Size:


Font: