ಮತ್ತಾಯನು 1 : 1 (IRVKN)
{ಯೇಸು ಕ್ರಿಸ್ತನ ವಂಶಾವಳಿ} [PS] ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ. [PE][PS]
ಮತ್ತಾಯನು 1 : 2 (IRVKN)
ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.
ಮತ್ತಾಯನು 1 : 3 (IRVKN)
ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.
ಮತ್ತಾಯನು 1 : 4 (IRVKN)
ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು.
ಮತ್ತಾಯನು 1 : 5 (IRVKN)
[* ಲೂಕ 3:28-38] ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು [† ರೂತ. 4:21-22] ಓಬೇದನು ರೂತಳಲ್ಲಿ [‡ ರೂತ. 4:21-22] ಹುಟ್ಟಿದವನು. ಓಬೇದನ ಮಗನು ಇಷಯನು.
ಮತ್ತಾಯನು 1 : 6 (IRVKN)
ಇಷಯನ ಮಗನು ಅರಸನಾದ ದಾವೀದನು. [§ 2 ಸಮು 12:24] ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.
ಮತ್ತಾಯನು 1 : 7 (IRVKN)
ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.
ಮತ್ತಾಯನು 1 : 8 (IRVKN)
ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.
ಮತ್ತಾಯನು 1 : 9 (IRVKN)
ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.
ಮತ್ತಾಯನು 1 : 10 (IRVKN)
ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.
ಮತ್ತಾಯನು 1 : 11 (IRVKN)
ಆಮೋನ ಮಗನು ಯೋಷೀಯನು. [* 2 ಅರಸು. 24:14, 15; 25-11] ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.
ಮತ್ತಾಯನು 1 : 12 (IRVKN)
ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು
ಮತ್ತಾಯನು 1 : 13 (IRVKN)
ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು.
ಮತ್ತಾಯನು 1 : 14 (IRVKN)
ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.
ಮತ್ತಾಯನು 1 : 15 (IRVKN)
ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು.
ಮತ್ತಾಯನು 1 : 16 (IRVKN)
ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು. [PE][PS]
ಮತ್ತಾಯನು 1 : 17 (IRVKN)
ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು. [PS]
ಮತ್ತಾಯನು 1 : 18 (IRVKN)
{ಯೇಸು ಕ್ರಿಸ್ತನ ಜನನವು} [PS] ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, [† ಲೂಕ 1:27,35] ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
ಮತ್ತಾಯನು 1 : 19 (IRVKN)
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
ಮತ್ತಾಯನು 1 : 20 (IRVKN)
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
ಮತ್ತಾಯನು 1 : 21 (IRVKN)
[‡ ಲೂಕ 1:31] ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
ಮತ್ತಾಯನು 1 : 22 (IRVKN)
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, [QBR]
ಮತ್ತಾಯನು 1 : 23 (IRVKN)
[§ ಯೆಶಾ 7:14] “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; [QBR] ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. [QBR] ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” [PE][PS]
ಮತ್ತಾಯನು 1 : 24 (IRVKN)
ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
ಮತ್ತಾಯನು 1 : 25 (IRVKN)
ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: