ಮತ್ತಾಯನು 10 : 1 (IRVKN)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. [PE][PS]
ಮತ್ತಾಯನು 10 : 2 (IRVKN)
ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
ಮತ್ತಾಯನು 10 : 3 (IRVKN)
ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,
ಮತ್ತಾಯನು 10 : 4 (IRVKN)
ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ. [PE][PS]
ಮತ್ತಾಯನು 10 : 5 (IRVKN)
ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
ಮತ್ತಾಯನು 10 : 6 (IRVKN)
ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
ಮತ್ತಾಯನು 10 : 7 (IRVKN)
‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
ಮತ್ತಾಯನು 10 : 8 (IRVKN)
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ಮತ್ತಾಯನು 10 : 9 (IRVKN)
ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,
ಮತ್ತಾಯನು 10 : 10 (IRVKN)
ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
ಮತ್ತಾಯನು 10 : 11 (IRVKN)
ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
ಮತ್ತಾಯನು 10 : 12 (IRVKN)
ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.
ಮತ್ತಾಯನು 10 : 13 (IRVKN)
ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
ಮತ್ತಾಯನು 10 : 14 (IRVKN)
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
ಮತ್ತಾಯನು 10 : 15 (IRVKN)
[* ಮತ್ತಾ 11:24] ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. [PE][PS]
ಮತ್ತಾಯನು 10 : 16 (IRVKN)
“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
ಮತ್ತಾಯನು 10 : 17 (IRVKN)
ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
ಮತ್ತಾಯನು 10 : 18 (IRVKN)
ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
ಮತ್ತಾಯನು 10 : 19 (IRVKN)
ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
ಮತ್ತಾಯನು 10 : 20 (IRVKN)
ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.
ಮತ್ತಾಯನು 10 : 21 (IRVKN)
ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
ಮತ್ತಾಯನು 10 : 22 (IRVKN)
ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
ಮತ್ತಾಯನು 10 : 23 (IRVKN)
ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. [PE][PS]
ಮತ್ತಾಯನು 10 : 24 (IRVKN)
[† ಮಾರ್ಕ 3:22; ಲೂಕ 6:40; ಯೋಹಾ 13:16] “ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.
ಮತ್ತಾಯನು 10 : 25 (IRVKN)
ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ [‡ ಪಿಶಾಚಿಗಳ ಒಡೆಯನು] ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
ಮತ್ತಾಯನು 10 : 26 (IRVKN)
ಆದರೂ ಅವರಿಗೆ ಹೆದರಬೇಡಿರಿ. [§ ಮಾರ್ಕ 4:22; ಲೂಕ 8:17; 12:2-9. ] ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
ಮತ್ತಾಯನು 10 : 27 (IRVKN)
ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
ಮತ್ತಾಯನು 10 : 28 (IRVKN)
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ಮತ್ತಾಯನು 10 : 29 (IRVKN)
ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
ಮತ್ತಾಯನು 10 : 30 (IRVKN)
ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
ಮತ್ತಾಯನು 10 : 31 (IRVKN)
ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ. [PE][PS]
ಮತ್ತಾಯನು 10 : 32 (IRVKN)
“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
ಮತ್ತಾಯನು 10 : 33 (IRVKN)
ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. [PE][PS]
ಮತ್ತಾಯನು 10 : 34 (IRVKN)
[* ಲೂಕ 12:51-53.] “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
ಮತ್ತಾಯನು 10 : 35 (IRVKN)
ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
ಮತ್ತಾಯನು 10 : 36 (IRVKN)
[† ಮೀಕ 7:6.] ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.
ಮತ್ತಾಯನು 10 : 37 (IRVKN)
ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
ಮತ್ತಾಯನು 10 : 38 (IRVKN)
ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
ಮತ್ತಾಯನು 10 : 39 (IRVKN)
ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. [PE][PS]
ಮತ್ತಾಯನು 10 : 40 (IRVKN)
[‡ ಲೂಕ 10:16.] “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; [§ ಮಾರ್ಕ 9:37; ಲೂಕ 9:48.] ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
ಮತ್ತಾಯನು 10 : 41 (IRVKN)
ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
ಮತ್ತಾಯನು 10 : 42 (IRVKN)
ಮತ್ತು [* ಮತ್ತಾ 25:40; ಮಾರ್ಕ 9:41.] ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: