ಮತ್ತಾಯನು 11 : 1 (IRVKN)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. [PS]
ಮತ್ತಾಯನು 11 : 2 (IRVKN)
{ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು} [PS] [* ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು (ಯೆಶಾ 35:5, 6; 61:1) ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನ್ನು ಕೇಳಿ ಯೇಸುವಿನ ಬಳಿಗೆ. ] ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
ಮತ್ತಾಯನು 11 : 3 (IRVKN)
“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
ಮತ್ತಾಯನು 11 : 4 (IRVKN)
ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;
ಮತ್ತಾಯನು 11 : 5 (IRVKN)
ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
ಮತ್ತಾಯನು 11 : 6 (IRVKN)
ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. [PE][PS]
ಮತ್ತಾಯನು 11 : 7 (IRVKN)
ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
ಮತ್ತಾಯನು 11 : 8 (IRVKN)
ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
ಮತ್ತಾಯನು 11 : 9 (IRVKN)
ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
ಮತ್ತಾಯನು 11 : 10 (IRVKN)
[† ಮಲಾ. 3:1:] ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
ಮತ್ತಾಯನು 11 : 11 (IRVKN)
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 11 : 12 (IRVKN)
ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
ಮತ್ತಾಯನು 11 : 13 (IRVKN)
ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.
ಮತ್ತಾಯನು 11 : 14 (IRVKN)
ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
ಮತ್ತಾಯನು 11 : 15 (IRVKN)
ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
ಮತ್ತಾಯನು 11 : 16 (IRVKN)
ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
ಮತ್ತಾಯನು 11 : 17 (IRVKN)
‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
ಮತ್ತಾಯನು 11 : 18 (IRVKN)
ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
ಮತ್ತಾಯನು 11 : 19 (IRVKN)
ಮನುಷ್ಯಕುಮಾರನು ಬಂದನು, [‡ ಮತ್ತಾ 9:10; ಲೂಕ 15:2:] ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು [§ ಕೆಲವು ಪ್ರತಿಗಳಲ್ಲಿ ಭ್ರಷ್ಟರ ಎಂಬುದಾಗಿದೆ. ] ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. [* ಆದರೆ ನಿಜವಾದ ಜ್ಞಾನಿಯು ಒಳ್ಳೆಯ ಕಾರ್ಯಗಳನ್ನು ಮಾಡುವುದರ ಮೂಲಕ ಜ್ಞಾನವನ್ನು ತೋರ್ಪಡಿಸುತ್ತಾನೆ ಅಂದನು. ] ಆದರೆ ಜ್ಞಾನವು ಅದರ [† ಕೆಲವು ಪ್ರತಿಗಳಲ್ಲಿ ಮಕ್ಕಳಿಂದ. ಅಂದರೆ ಜ್ಞಾನಾವಲಂಬಿಗಳಿಂದ ಎಂದು ಬರೆದದೆ; ಲೂಕ 7:35 ನೋಡಿರಿ. ] ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. [PS]
ಮತ್ತಾಯನು 11 : 20 (IRVKN)
{ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು} (ಲೂಕ 10:12-15; ಲೂಕ 10:21-22) [PS] ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
ಮತ್ತಾಯನು 11 : 21 (IRVKN)
ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
ಮತ್ತಾಯನು 11 : 22 (IRVKN)
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
ಮತ್ತಾಯನು 11 : 23 (IRVKN)
ಎಲೈ ಕಪೆರ್ನೌಮೇ [‡ ಯೆಶಾ 14:13-15:] ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
ಮತ್ತಾಯನು 11 : 24 (IRVKN)
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು. [PE][PS]
ಮತ್ತಾಯನು 11 : 25 (IRVKN)
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
ಮತ್ತಾಯನು 11 : 26 (IRVKN)
ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
ಮತ್ತಾಯನು 11 : 27 (IRVKN)
[§ ಮತ್ತಾ 28:18; ಯೋಹಾ 1:18; 6, 46:] ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. [PS]
ಮತ್ತಾಯನು 11 : 28 (IRVKN)
{ಯೇಸುವಿನಿಂದ ವಿಶ್ರಾಂತಿಯ ಆಹ್ವಾನ} [PS] “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
ಮತ್ತಾಯನು 11 : 29 (IRVKN)
[* ಯೆರೆ 6:16; ಯೋಹಾ 13:15; ಫಿಲಿ. 2:5, 7, 8:] ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
ಮತ್ತಾಯನು 11 : 30 (IRVKN)
ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: