ಮತ್ತಾಯನು 12 : 1 (IRVKN)
{ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು} (ಮಾರ್ಕ 2:23; 3:6; ಲೂಕ 6:1-11) [PS] ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
ಮತ್ತಾಯನು 12 : 2 (IRVKN)
ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
ಮತ್ತಾಯನು 12 : 3 (IRVKN)
ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
ಮತ್ತಾಯನು 12 : 4 (IRVKN)
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
ಮತ್ತಾಯನು 12 : 5 (IRVKN)
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
ಮತ್ತಾಯನು 12 : 6 (IRVKN)
[* ಮತ್ತಾ 1:41,42:] ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.
ಮತ್ತಾಯನು 12 : 7 (IRVKN)
[† ಹೋಶೇ. 6:6:] ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
ಮತ್ತಾಯನು 12 : 8 (IRVKN)
ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು. [PE][PS]
ಮತ್ತಾಯನು 12 : 9 (IRVKN)
ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
ಮತ್ತಾಯನು 12 : 10 (IRVKN)
ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
ಮತ್ತಾಯನು 12 : 11 (IRVKN)
ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
ಮತ್ತಾಯನು 12 : 12 (IRVKN)
ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.
ಮತ್ತಾಯನು 12 : 13 (IRVKN)
ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
ಮತ್ತಾಯನು 12 : 14 (IRVKN)
ಆದರೆ ಫರಿಸಾಯರು ಹೊರಕ್ಕೆ ಹೋಗಿ [‡ ಮತ್ತಾ 22:15; 27:1, 7; 28:12; ಯೋಹಾ 5:18; 10:39; 11:5 3:] ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು. [PS]
ಮತ್ತಾಯನು 12 : 15 (IRVKN)
{ಯೇಸು ದೇವರು ಆರಿಸಿಕೊಂಡ ಸೇವಕ} [PS] ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
ಮತ್ತಾಯನು 12 : 16 (IRVKN)
ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.
ಮತ್ತಾಯನು 12 : 17 (IRVKN)
ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,
ಮತ್ತಾಯನು 12 : 18 (IRVKN)
[§ ಯೆಶಾ 42:1-4:] “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
ಮತ್ತಾಯನು 12 : 19 (IRVKN)
ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.
ಮತ್ತಾಯನು 12 : 20 (IRVKN)
ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
ಮತ್ತಾಯನು 12 : 21 (IRVKN)
ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.” [PS]
ಮತ್ತಾಯನು 12 : 22 (IRVKN)
{ಯೇಸು ಮತ್ತು ಬೆಲ್ಜೆಬೂಲನು} (ಮಾರ್ಕ 3:22-30; ಲೂಕ 11:14-32; 12:10) [PS] ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
ಮತ್ತಾಯನು 12 : 23 (IRVKN)
ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.
ಮತ್ತಾಯನು 12 : 24 (IRVKN)
ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
ಮತ್ತಾಯನು 12 : 25 (IRVKN)
ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
ಮತ್ತಾಯನು 12 : 26 (IRVKN)
ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?
ಮತ್ತಾಯನು 12 : 27 (IRVKN)
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
ಮತ್ತಾಯನು 12 : 28 (IRVKN)
ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?
ಮತ್ತಾಯನು 12 : 29 (IRVKN)
ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
ಮತ್ತಾಯನು 12 : 30 (IRVKN)
[* ಮಾರ್ಕ 9:40; ಲೂಕ 9:50. ] ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.
ಮತ್ತಾಯನು 12 : 31 (IRVKN)
ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
ಮತ್ತಾಯನು 12 : 32 (IRVKN)
ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. [PS]
ಮತ್ತಾಯನು 12 : 33 (IRVKN)
{ಮರ ಮತ್ತು ಫಲ} [PS] [† ಮತ್ತಾ 7:16-20; ಲೂಕ 6:44:] “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
ಮತ್ತಾಯನು 12 : 34 (IRVKN)
ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? [‡ ಲೂಕ 6:45:] ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
ಮತ್ತಾಯನು 12 : 35 (IRVKN)
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
ಮತ್ತಾಯನು 12 : 36 (IRVKN)
ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
ಮತ್ತಾಯನು 12 : 37 (IRVKN)
ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು. [PS]
ಮತ್ತಾಯನು 12 : 38 (IRVKN)
{ಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದು} [PS] ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, [§ ಮಾರ್ಕ 8:11, 12; ಯೋಹಾ 2:18; 1 ಕೊರಿ 1:22:] ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
ಮತ್ತಾಯನು 12 : 39 (IRVKN)
[* ಅಂದರೆ, ದೇವದ್ರೋಹಿಯಾದ. ] “ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.
ಮತ್ತಾಯನು 12 : 40 (IRVKN)
ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
ಮತ್ತಾಯನು 12 : 41 (IRVKN)
ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
ಮತ್ತಾಯನು 12 : 42 (IRVKN)
ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು. [PS]
ಮತ್ತಾಯನು 12 : 43 (IRVKN)
{ವಿಶ್ರಾಂತಿ ಸಿಕ್ಕದ ದೆವ್ವ} [PS] “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
ಮತ್ತಾಯನು 12 : 44 (IRVKN)
ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
ಮತ್ತಾಯನು 12 : 45 (IRVKN)
ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು. [PS]
ಮತ್ತಾಯನು 12 : 46 (IRVKN)
{ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು} (ಮಾರ್ಕ 3:31-35; ಲೂಕ 8:19-21) [PS] ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
ಮತ್ತಾಯನು 12 : 47 (IRVKN)
ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು.
ಮತ್ತಾಯನು 12 : 48 (IRVKN)
ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ
ಮತ್ತಾಯನು 12 : 49 (IRVKN)
ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.
ಮತ್ತಾಯನು 12 : 50 (IRVKN)
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50

BG:

Opacity:

Color:


Size:


Font: