ಮತ್ತಾಯನು 13 : 1 (IRVKN)
{ಬಿತ್ತುವವನ ಸಾಮ್ಯ} [PS] ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.
ಮತ್ತಾಯನು 13 : 2 (IRVKN)
ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.
ಮತ್ತಾಯನು 13 : 3 (IRVKN)
ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. [PE][PS]
ಮತ್ತಾಯನು 13 : 4 (IRVKN)
“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.
ಮತ್ತಾಯನು 13 : 5 (IRVKN)
ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.
ಮತ್ತಾಯನು 13 : 6 (IRVKN)
ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.
ಮತ್ತಾಯನು 13 : 7 (IRVKN)
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಮತ್ತಾಯನು 13 : 8 (IRVKN)
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
ಮತ್ತಾಯನು 13 : 9 (IRVKN)
ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. [PE][PS]
ಮತ್ತಾಯನು 13 : 10 (IRVKN)
ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.
ಮತ್ತಾಯನು 13 : 11 (IRVKN)
ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
ಮತ್ತಾಯನು 13 : 12 (IRVKN)
ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
ಮತ್ತಾಯನು 13 : 13 (IRVKN)
ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. [QBR]
ಮತ್ತಾಯನು 13 : 14 (IRVKN)
“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, [QBR] [* ಯೆಶಾ 6:9, 10:] ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. [QBR] ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. [QBR]
ಮತ್ತಾಯನು 13 : 15 (IRVKN)
ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. [QBR] ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, [QBR] ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು [QBR] ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’ ” ಎಂಬುದೇ.
ಮತ್ತಾಯನು 13 : 16 (IRVKN)
“ಆದರೆ ನೀವು ಧನ್ಯರು ಏಕೆಂದರೆ [† ಲೂಕ 10:23, 24:] ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
ಮತ್ತಾಯನು 13 : 17 (IRVKN)
ನಿಮಗೆ ಸತ್ಯವಾಗಿ ಹೇಳುತ್ತೇನೆ. [‡ ಯೋಹಾ 8:56; ಇಬ್ರಿ. 11:13; 1 ಪೇತ್ರ. 1:10, 11. ] ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. [PE][PS]
ಮತ್ತಾಯನು 13 : 18 (IRVKN)
“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.
ಮತ್ತಾಯನು 13 : 19 (IRVKN)
ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ [§ ಮೂಲ: ಕೆಡುಕನು] ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
ಮತ್ತಾಯನು 13 : 20 (IRVKN)
ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,
ಮತ್ತಾಯನು 13 : 21 (IRVKN)
ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
ಮತ್ತಾಯನು 13 : 22 (IRVKN)
ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
ಮತ್ತಾಯನು 13 : 23 (IRVKN)
ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು. [PS]
ಮತ್ತಾಯನು 13 : 24 (IRVKN)
{ಗೋದಿ ಮತ್ತು ಕಳೆಗಳ ಸಾಮ್ಯ} [PS] ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
ಮತ್ತಾಯನು 13 : 25 (IRVKN)
ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.
ಮತ್ತಾಯನು 13 : 26 (IRVKN)
ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.
ಮತ್ತಾಯನು 13 : 27 (IRVKN)
ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
ಮತ್ತಾಯನು 13 : 28 (IRVKN)
ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
ಮತ್ತಾಯನು 13 : 29 (IRVKN)
ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.
ಮತ್ತಾಯನು 13 : 30 (IRVKN)
ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, [* ಮತ್ತಾ 3:12:] ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’ ” ಅಂದನು. [PS]
ಮತ್ತಾಯನು 13 : 31 (IRVKN)
{ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ} [PS] ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
ಮತ್ತಾಯನು 13 : 32 (IRVKN)
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
ಮತ್ತಾಯನು 13 : 33 (IRVKN)
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.” [PE][PS]
ಮತ್ತಾಯನು 13 : 34 (IRVKN)
ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.
ಮತ್ತಾಯನು 13 : 35 (IRVKN)
ಹೀಗೆ, [† ಕೀರ್ತ 78:2:] “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
ಮತ್ತಾಯನು 13 : 36 (IRVKN)
ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
ಮತ್ತಾಯನು 13 : 37 (IRVKN)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.
ಮತ್ತಾಯನು 13 : 38 (IRVKN)
ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ [‡ ಮತ್ತಾ 13:43; 8:12; ಮಾರ್ಕ 16:15; ಕೊಲೊ 1:6:] ರಾಜ್ಯದ ಮಕ್ಕಳು.
ಮತ್ತಾಯನು 13 : 39 (IRVKN)
ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.
ಮತ್ತಾಯನು 13 : 40 (IRVKN)
ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.
ಮತ್ತಾಯನು 13 : 41 (IRVKN)
[§ ಮತ್ತಾ 18:7; 24:31. ] ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
ಮತ್ತಾಯನು 13 : 42 (IRVKN)
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
ಮತ್ತಾಯನು 13 : 43 (IRVKN)
ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು. ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ [PE][PS]
ಮತ್ತಾಯನು 13 : 44 (IRVKN)
“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
ಮತ್ತಾಯನು 13 : 45 (IRVKN)
ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
ಮತ್ತಾಯನು 13 : 46 (IRVKN)
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. [PE][PS]
ಮತ್ತಾಯನು 13 : 47 (IRVKN)
“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
ಮತ್ತಾಯನು 13 : 48 (IRVKN)
ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
ಮತ್ತಾಯನು 13 : 49 (IRVKN)
ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.
ಮತ್ತಾಯನು 13 : 50 (IRVKN)
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. [PE][PS]
ಮತ್ತಾಯನು 13 : 51 (IRVKN)
“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
ಮತ್ತಾಯನು 13 : 52 (IRVKN)
ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು. [PE][PS]
ಮತ್ತಾಯನು 13 : 53 (IRVKN)
ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು. [PS]
ಮತ್ತಾಯನು 13 : 54 (IRVKN)
{ಯೇಸುವನ್ನು ನಜರೇತ್ ಊರಿನವರು ತಾತ್ಸಾರ ಮಾಡಿದ್ದು} (ಮಾರ್ಕ 6:1-6; ಲೂಕ 4:15-30) [PS] ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
ಮತ್ತಾಯನು 13 : 55 (IRVKN)
ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
ಮತ್ತಾಯನು 13 : 56 (IRVKN)
ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು [* ಮತ್ತಾ 11:6:] ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
ಮತ್ತಾಯನು 13 : 57 (IRVKN)
ಆದರೆ ಯೇಸುವು ಅವರಿಗೆ [† ಯೋಹಾ 4:44] “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
ಮತ್ತಾಯನು 13 : 58 (IRVKN)
ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58

BG:

Opacity:

Color:


Size:


Font: