ಮತ್ತಾಯನು 14 : 1 (IRVKN)
{ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು} (ಮಾರ್ಕ 6:14-29; ಲೂಕ 9:7-9) [PS] ಆ ಕಾಲದಲ್ಲಿ [* ರೋಮಾನ್ ಚಕ್ರಾಧಿಪತ್ಯದಲ್ಲಿ ದೇಶದ ಅಥವಾ ಪ್ರಾಂತ್ಯದ ನಾಲ್ಕನೆಯ ಒಂದು ಭಾಗದ ಅಧಿಪತಿ. ] ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
ಮತ್ತಾಯನು 14 : 2 (IRVKN)
ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
ಮತ್ತಾಯನು 14 : 3 (IRVKN)
ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
ಮತ್ತಾಯನು 14 : 4 (IRVKN)
ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
ಮತ್ತಾಯನು 14 : 5 (IRVKN)
ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಮತ್ತಾಯನು 14 : 6 (IRVKN)
ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
ಮತ್ತಾಯನು 14 : 7 (IRVKN)
ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
ಮತ್ತಾಯನು 14 : 8 (IRVKN)
ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
ಮತ್ತಾಯನು 14 : 9 (IRVKN)
ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
ಮತ್ತಾಯನು 14 : 10 (IRVKN)
ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
ಮತ್ತಾಯನು 14 : 11 (IRVKN)
ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
ಮತ್ತಾಯನು 14 : 12 (IRVKN)
ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. [PS]
ಮತ್ತಾಯನು 14 : 13 (IRVKN)
{ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು} (ಮಾರ್ಕ 6:30-44; ಲೂಕ 9:10-17; ಯೋಹಾ 6:1-14) [PS] ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
ಮತ್ತಾಯನು 14 : 14 (IRVKN)
ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ಮತ್ತಾಯನು 14 : 15 (IRVKN)
ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
ಮತ್ತಾಯನು 14 : 16 (IRVKN)
ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
ಮತ್ತಾಯನು 14 : 17 (IRVKN)
ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,
ಮತ್ತಾಯನು 14 : 18 (IRVKN)
ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.
ಮತ್ತಾಯನು 14 : 19 (IRVKN)
ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
ಮತ್ತಾಯನು 14 : 20 (IRVKN)
ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
ಮತ್ತಾಯನು 14 : 21 (IRVKN)
ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು. [PS]
ಮತ್ತಾಯನು 14 : 22 (IRVKN)
{ಯೇಸು ಸಮುದ್ರದ ಮೇಲೆ ನಡೆದದ್ದು} (ಮಾರ್ಕ 6:45-52; ಯೋಹಾ 6:15-21) [PS] ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
ಮತ್ತಾಯನು 14 : 23 (IRVKN)
ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ [† ಲೂಕ 6:12; 9:18, 28; 11:1. ] ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
ಮತ್ತಾಯನು 14 : 24 (IRVKN)
ಆದರೆ ದೋಣಿಯು [‡ ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆ] ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
ಮತ್ತಾಯನು 14 : 25 (IRVKN)
ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
ಮತ್ತಾಯನು 14 : 26 (IRVKN)
ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
ಮತ್ತಾಯನು 14 : 27 (IRVKN)
ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
ಮತ್ತಾಯನು 14 : 28 (IRVKN)
ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
ಮತ್ತಾಯನು 14 : 29 (IRVKN)
ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
ಮತ್ತಾಯನು 14 : 30 (IRVKN)
ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
ಮತ್ತಾಯನು 14 : 31 (IRVKN)
ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
ಮತ್ತಾಯನು 14 : 32 (IRVKN)
ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
ಮತ್ತಾಯನು 14 : 33 (IRVKN)
ಆಗ ದೋಣಿಯಲ್ಲಿದ್ದ ಶಿಷ್ಯರು [§ ಮತ್ತಾ 8:29; 16:16; ಮಾರ್ಕ 1:1; ಲೂಕ 1:35; ಕೀರ್ತ 2:7:] “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು. [PE][PS]
ಮತ್ತಾಯನು 14 : 34 (IRVKN)
ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
ಮತ್ತಾಯನು 14 : 35 (IRVKN)
ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
ಮತ್ತಾಯನು 14 : 36 (IRVKN)
ಅವರು ಆತನನ್ನು [* ಮತ್ತಾ 9:20; ಲೂಕ 6:19:] ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: