ಮತ್ತಾಯನು 15 : 1 (IRVKN)
{ಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದು} (ಮಾರ್ಕ 7:1-23) [PS] ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
ಮತ್ತಾಯನು 15 : 2 (IRVKN)
“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
ಮತ್ತಾಯನು 15 : 3 (IRVKN)
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
ಮತ್ತಾಯನು 15 : 4 (IRVKN)
ಹೇಗೆಂದರೆ [* ವಿಮೋ 20:12:] ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ [† ವಿಮೋ 21:17:] ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
ಮತ್ತಾಯನು 15 : 5 (IRVKN)
ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
ಮತ್ತಾಯನು 15 : 6 (IRVKN)
ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
ಮತ್ತಾಯನು 15 : 7 (IRVKN)
ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ, [QBR]
ಮತ್ತಾಯನು 15 : 8 (IRVKN)
[‡ ಯೆಶಾ 29:13:] “ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ [QBR] ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. [QBR]
ಮತ್ತಾಯನು 15 : 9 (IRVKN)
ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.
ಮತ್ತಾಯನು 15 : 10 (IRVKN)
ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,
ಮತ್ತಾಯನು 15 : 11 (IRVKN)
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು. [PE][PS]
ಮತ್ತಾಯನು 15 : 12 (IRVKN)
ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
ಮತ್ತಾಯನು 15 : 13 (IRVKN)
ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.
ಮತ್ತಾಯನು 15 : 14 (IRVKN)
ಅವರನ್ನು ಬಿಡಿರಿ, ಅವರು [§ ಮತ್ತಾ 23:16, 24; ಲೂಕ 6:39. ] ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
ಮತ್ತಾಯನು 15 : 15 (IRVKN)
ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,
ಮತ್ತಾಯನು 15 : 16 (IRVKN)
ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?
ಮತ್ತಾಯನು 15 : 17 (IRVKN)
ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?
ಮತ್ತಾಯನು 15 : 18 (IRVKN)
ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
ಮತ್ತಾಯನು 15 : 19 (IRVKN)
ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
ಮತ್ತಾಯನು 15 : 20 (IRVKN)
ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು. [PS]
ಮತ್ತಾಯನು 15 : 21 (IRVKN)
{ಕಾನಾನ್ಯ ಸ್ತ್ರೀಯ ನಂಬಿಕೆ} (ಮಾರ್ಕ 7:24-30) [PS] ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
ಮತ್ತಾಯನು 15 : 22 (IRVKN)
ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
ಮತ್ತಾಯನು 15 : 23 (IRVKN)
ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
ಮತ್ತಾಯನು 15 : 24 (IRVKN)
ಆದರೆ ಯೇಸು ಹೇಳಿದ್ದೇನೆಂದರೆ [* ಮತ್ತಾ 10:6:] “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
ಮತ್ತಾಯನು 15 : 25 (IRVKN)
ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.
ಮತ್ತಾಯನು 15 : 26 (IRVKN)
ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
ಮತ್ತಾಯನು 15 : 27 (IRVKN)
ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
ಮತ್ತಾಯನು 15 : 28 (IRVKN)
ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು. [PS]
ಮತ್ತಾಯನು 15 : 29 (IRVKN)
{ಯೇಸು ಅನೇಕರನ್ನು ಸ್ವಸ್ಥಮಾಡಿದ್ದು} [PS] ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
ಮತ್ತಾಯನು 15 : 30 (IRVKN)
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
ಮತ್ತಾಯನು 15 : 31 (IRVKN)
ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು. [PS]
ಮತ್ತಾಯನು 15 : 32 (IRVKN)
{ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು} (ಮಾರ್ಕ 8:1-10) [PS] ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
ಮತ್ತಾಯನು 15 : 33 (IRVKN)
ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
ಮತ್ತಾಯನು 15 : 34 (IRVKN)
ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
ಮತ್ತಾಯನು 15 : 35 (IRVKN)
ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
ಮತ್ತಾಯನು 15 : 36 (IRVKN)
ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
ಮತ್ತಾಯನು 15 : 37 (IRVKN)
ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
ಮತ್ತಾಯನು 15 : 38 (IRVKN)
ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
ಮತ್ತಾಯನು 15 : 39 (IRVKN)
ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: