ಮತ್ತಾಯನು 16 : 1 (IRVKN)
ಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದು
ಮಾರ್ಕ 9:11-21
ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
ಮತ್ತಾಯನು 16 : 2 (IRVKN)
* ಕೆಲವು ಪ್ರತಿಗಳಲ್ಲಿ 2 ನೆಯ 3 ನೆಯ ವಚನಗಳು ಇಲ್ಲ. ಆತನು ಅವರಿಗೆ, “ ‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
ಮತ್ತಾಯನು 16 : 3 (IRVKN)
ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
ಮತ್ತಾಯನು 16 : 4 (IRVKN)
ಅಂದರೆ ದೇವದ್ರೋಹಿಯಾದ. ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
ಮತ್ತಾಯನು 16 : 5 (IRVKN)
ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
ಮತ್ತಾಯನು 16 : 6 (IRVKN)
ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ[‡ 1 ಕೊರಿ 5:6-8; ಗಲಾ. 5: 9 ]ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
ಮತ್ತಾಯನು 16 : 7 (IRVKN)
ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಮತ್ತಾಯನು 16 : 8 (IRVKN)
ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
ಮತ್ತಾಯನು 16 : 9 (IRVKN)
ಆ ಐದು ರೊಟ್ಟಿಗಳನ್ನು[§ ಮತ್ತಾ 14:17- 21 ]ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
ಮತ್ತಾಯನು 16 : 10 (IRVKN)
ಇಲ್ಲವೆ ಆ* ಮತ್ತಾ 15:34-38: ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
ಮತ್ತಾಯನು 16 : 11 (IRVKN)
ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
ಮತ್ತಾಯನು 16 : 12 (IRVKN)
ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
ಮತ್ತಾಯನು 16 : 13 (IRVKN)
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
ಮಾರ್ಕ 8:27-29; ಲೂಕ 9:18-21
ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
ಮತ್ತಾಯನು 16 : 14 (IRVKN)
ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
ಮತ್ತಾಯನು 16 : 15 (IRVKN)
ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
ಮತ್ತಾಯನು 16 : 16 (IRVKN)
ಆಗ ಸೀಮೋನ ಪೇತ್ರನು, [† ಮತ್ತಾ 27:54; ಯೋಹಾ 6: 69 ]“ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
ಮತ್ತಾಯನು 16 : 17 (IRVKN)
ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
ಮತ್ತಾಯನು 16 : 18 (IRVKN)
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಮೂಲ: ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು. ಪೇತ್ರನು, ಈ [§ ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ 2: 20 ]ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
ಮತ್ತಾಯನು 16 : 19 (IRVKN)
ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.* ಮತ್ತಾ 18:18; ಯೋಹಾ 20:23: ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
ಮತ್ತಾಯನು 16 : 20 (IRVKN)
ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ಮತ್ತಾಯನು 16 : 21 (IRVKN)
ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
ಮಾರ್ಕ 8:31-9:1; ಲೂಕ 9:22-27
ಅಂದಿನಿಂದ ಕೆಲವು ಪ್ರತಿಗಳಲ್ಲಿ ಯೇಸು ಕ್ರಿಸ್ತನೆಂಬ ಪದವಿದೆ. ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
ಮತ್ತಾಯನು 16 : 22 (IRVKN)
ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
ಮತ್ತಾಯನು 16 : 23 (IRVKN)
ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
ಮತ್ತಾಯನು 16 : 24 (IRVKN)
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ಮತ್ತಾ 10:38, 39; ಲೂಕ 14:27; 17:33; ಯೋಹಾ 12:25: “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಮತ್ತಾಯನು 16 : 25 (IRVKN)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
ಮತ್ತಾಯನು 16 : 26 (IRVKN)
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
ಮತ್ತಾಯನು 16 : 27 (IRVKN)
ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
ಮತ್ತಾಯನು 16 : 28 (IRVKN)
“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28