ಮತ್ತಾಯನು 17 : 1 (IRVKN)
ಯೇಸು ರೂಪಾಂತರಗೊಂಡಿದ್ದು
ಮಾರ್ಕ 9:2-13; ಲೂಕ 9:28-36
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
ಮತ್ತಾಯನು 17 : 2 (IRVKN)
ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
ಮತ್ತಾಯನು 17 : 3 (IRVKN)
ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
ಮತ್ತಾಯನು 17 : 4 (IRVKN)
ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
ಮತ್ತಾಯನು 17 : 5 (IRVKN)
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ * ಮತ್ತಾ 3:17: “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
ಮತ್ತಾಯನು 17 : 6 (IRVKN)
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
ಮತ್ತಾಯನು 17 : 7 (IRVKN)
ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.
ಮತ್ತಾಯನು 17 : 8 (IRVKN)
ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
ಮತ್ತಾಯನು 17 : 9 (IRVKN)
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
ಮತ್ತಾಯನು 17 : 10 (IRVKN)
ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
ಮತ್ತಾಯನು 17 : 11 (IRVKN)
ಯೇಸು ಅವರಿಗೆ, ಮಲಾ. 4:5, 6: “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
ಮತ್ತಾಯನು 17 : 12 (IRVKN)
ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
ಮತ್ತಾಯನು 17 : 13 (IRVKN)
ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
ಮತ್ತಾಯನು 17 : 14 (IRVKN)
ಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದು
ಮಾರ್ಕ 9:14-29; ಲೂಕ 9:37-42
ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
ಮತ್ತಾಯನು 17 : 15 (IRVKN)
“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
ಮತ್ತಾಯನು 17 : 16 (IRVKN)
ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
ಮತ್ತಾಯನು 17 : 17 (IRVKN)
ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
ಮತ್ತಾಯನು 17 : 18 (IRVKN)
ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
ಮತ್ತಾಯನು 17 : 19 (IRVKN)
ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
ಮತ್ತಾಯನು 17 : 20 (IRVKN)
ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.[‡ ಮತ್ತಾ 21:21; ಮಾರ್ಕ 11: 23 ]ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
ಮತ್ತಾಯನು 17 : 21 (IRVKN)
ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.§ ಮೂಲ ಗ್ರಂಥದಲ್ಲಿ ಇಲ್ಲ. ಆದರೆ ಕೆಲವು ಪ್ರತಿಗಳಲ್ಲಿ, ಆತನು, ಈ ರೀತಿಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
ಮತ್ತಾಯನು 17 : 22 (IRVKN)
ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು
ಮಾರ್ಕ 9:30-32; ಲೂಕ 9:43-45
ಅವರು * ಲೂಕ 2:44 ನೋಡಿರಿ; ಕೆಲವು ಪ್ರತಿಗಳಲ್ಲಿ, ಗಲಿಲಾಯದಲ್ಲಿರುವಾಗ ಎಂದು ಬರೆದದೆ. ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
ಮತ್ತಾಯನು 17 : 23 (IRVKN)
ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
ಮತ್ತಾಯನು 17 : 24 (IRVKN)
ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ [† ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ 30 13; 38:26: ]ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
ಮತ್ತಾಯನು 17 : 25 (IRVKN)
ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
ಮತ್ತಾಯನು 17 : 26 (IRVKN)
ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.
ಮತ್ತಾಯನು 17 : 27 (IRVKN)
ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಮೂಲ: ಶೆಕೆಲ್ ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27