ಮತ್ತಾಯನು 18 : 1 (IRVKN)
{ದೇವರ ರಾಜ್ಯದಲ್ಲಿ ದೊಡ್ಡವನು} (ಮಾರ್ಕ 9:33-37; ಲೂಕ 9:46-48) [PS] ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
ಮತ್ತಾಯನು 18 : 2 (IRVKN)
ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
ಮತ್ತಾಯನು 18 : 3 (IRVKN)
ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 18 : 4 (IRVKN)
ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
ಮತ್ತಾಯನು 18 : 5 (IRVKN)
ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
ಮತ್ತಾಯನು 18 : 6 (IRVKN)
ಆದರೆ [* ಲೂಕ 17:1, 2:] ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ. [PE][PS]
ಮತ್ತಾಯನು 18 : 7 (IRVKN)
“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
ಮತ್ತಾಯನು 18 : 8 (IRVKN)
[† ಮತ್ತಾ 5:29, 30; ಮಾರ್ಕ 9:43-47:] ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
ಮತ್ತಾಯನು 18 : 9 (IRVKN)
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
ಮತ್ತಾಯನು 18 : 10 (IRVKN)
ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ [‡ ಕೀರ್ತ 34:7; ಲೂಕ 1:19; ಇಬ್ರಿ. 1:14:] ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
ಮತ್ತಾಯನು 18 : 11 (IRVKN)
ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು. [§ 11 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಲೂಕ 19:10 ನೋಡಿರಿ. ಮನುಷ್ಯಕುಮಾರನು ಕಳೆದುಹೋಗಿರುವುದನ್ನು ಹುಡುಕಿ ರಕ್ಷಿಸುವುದಕೋಸ್ಕರ ಬಂದನು. ] [PS]
ಮತ್ತಾಯನು 18 : 12 (IRVKN)
{ಕಳೆದುಹೋದ ಕುರಿಯ ಸಾಮ್ಯ} [PS] “ನಿಮ್ಮಲ್ಲಿ [* ಲೂಕ 15:4, 7:] ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
ಮತ್ತಾಯನು 18 : 13 (IRVKN)
ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 18 : 14 (IRVKN)
ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. [PS]
ಮತ್ತಾಯನು 18 : 15 (IRVKN)
{ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು} [PS] “ನಿನ್ನ ಸಹೋದರನು ನಿನ್ನ ವಿರುದ್ಧ [† ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ. ] ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
ಮತ್ತಾಯನು 18 : 16 (IRVKN)
ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ [‡ ಧರ್ಮೋ 19:15:] ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
ಮತ್ತಾಯನು 18 : 17 (IRVKN)
ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ [§ ಕೆಲವು ಪ್ರತಿಗಳಲ್ಲಿ, ಭ್ರಷ್ಟನಂತೆಯೂ ಎಂದು ಬರೆದದೆ. ] ಸುಂಕದವನಂತೆಯೂ ಇರಲಿ. [PE][PS]
ಮತ್ತಾಯನು 18 : 18 (IRVKN)
“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 18 : 19 (IRVKN)
[* ಮತ್ತಾ 7:7, 11; ಯೋಹಾ 15:7; 16:23:] ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
ಮತ್ತಾಯನು 18 : 20 (IRVKN)
ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು. [PS]
ಮತ್ತಾಯನು 18 : 21 (IRVKN)
{ಕರುಣೆಯಿಲ್ಲದ ಸೇವಕನ ಸಾಮ್ಯ} [PS] ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
ಮತ್ತಾಯನು 18 : 22 (IRVKN)
ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
ಮತ್ತಾಯನು 18 : 23 (IRVKN)
ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
ಮತ್ತಾಯನು 18 : 24 (IRVKN)
ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ [† ಮೂಲ 10,000 ತಲಾಂತು; ತಲಾಂತು ಅಂದರೆ ಸುಮಾರು 3,000 ರೂಪಾಯಿ. ] ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.
ಮತ್ತಾಯನು 18 : 25 (IRVKN)
ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
ಮತ್ತಾಯನು 18 : 26 (IRVKN)
ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.
ಮತ್ತಾಯನು 18 : 27 (IRVKN)
ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
ಮತ್ತಾಯನು 18 : 28 (IRVKN)
ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
ಮತ್ತಾಯನು 18 : 29 (IRVKN)
ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
ಮತ್ತಾಯನು 18 : 30 (IRVKN)
ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
ಮತ್ತಾಯನು 18 : 31 (IRVKN)
ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
ಮತ್ತಾಯನು 18 : 32 (IRVKN)
ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
ಮತ್ತಾಯನು 18 : 33 (IRVKN)
ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,
ಮತ್ತಾಯನು 18 : 34 (IRVKN)
ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
ಮತ್ತಾಯನು 18 : 35 (IRVKN)
[‡ ಮತ್ತಾ 6:14, 15; ಯಾಕೋಬ 2:13:] ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: