ಮತ್ತಾಯನು 19 : 1 (IRVKN)
ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು
ಮಾರ್ಕ 10:1-12
ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
ಮತ್ತಾಯನು 19 : 2 (IRVKN)
ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.
ಮತ್ತಾಯನು 19 : 3 (IRVKN)
ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, * ಮತ್ತಾ 5:31, 32: “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
ಮತ್ತಾಯನು 19 : 4 (IRVKN)
ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
ಮತ್ತಾಯನು 19 : 5 (IRVKN)
ಆದಿ 2:24; 1 ಕೊರಿ 6:16: ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
ಮತ್ತಾಯನು 19 : 6 (IRVKN)
ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.
ಮತ್ತಾಯನು 19 : 7 (IRVKN)
ಅದಕ್ಕೆ ಅವರು ಆತನನ್ನು, [‡ ಧರ್ಮೋ 24: 1 ]“ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
ಮತ್ತಾಯನು 19 : 8 (IRVKN)
ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.
ಮತ್ತಾಯನು 19 : 9 (IRVKN)
ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;§ ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ. ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
ಮತ್ತಾಯನು 19 : 10 (IRVKN)
ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.
ಮತ್ತಾಯನು 19 : 11 (IRVKN)
ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.
ಮತ್ತಾಯನು 19 : 12 (IRVKN)
ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು* 1 ಕೊರಿ 7:32: ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
ಮತ್ತಾಯನು 19 : 13 (IRVKN)
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
ಮಾರ್ಕ 10:13-16; ಲೂಕ 13:15-17
ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
ಮತ್ತಾಯನು 19 : 14 (IRVKN)
ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
ಮತ್ತಾಯನು 19 : 15 (IRVKN)
ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
ಮತ್ತಾಯನು 19 : 16 (IRVKN)
ಐಶ್ವರ್ಯವಂತನಾದ ಯುವಕನು
ಮಾರ್ಕ 10:17-27; ಲೂಕ 18:18-27
ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
ಮತ್ತಾಯನು 19 : 17 (IRVKN)
ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಯಾಜ 18:5; ನೆಹೆ 9:29; ರೋಮಾ. 10:5; ಗಲಾ. 3:12: ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
ಮತ್ತಾಯನು 19 : 18 (IRVKN)
ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.
ಮತ್ತಾಯನು 19 : 19 (IRVKN)
ವಿಮೋ 20:12-17; ಯಾಜ 19:18; ಲೂಕ 10:27: ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
ಮತ್ತಾಯನು 19 : 20 (IRVKN)
ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
ಮತ್ತಾಯನು 19 : 21 (IRVKN)
ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
ಮತ್ತಾಯನು 19 : 22 (IRVKN)
ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
ಮತ್ತಾಯನು 19 : 23 (IRVKN)
ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 19 : 24 (IRVKN)
“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.
ಮತ್ತಾಯನು 19 : 25 (IRVKN)
ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.
ಮತ್ತಾಯನು 19 : 26 (IRVKN)
ಯೇಸು ಅವರನ್ನು ದೃಷ್ಟಿಸಿ ನೋಡಿ § ಯೋಬ. 42:2; ಮಾರ್ಕ 14:36; ಲೂಕ 1:37: “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.
ಮತ್ತಾಯನು 19 : 27 (IRVKN)
ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ
ಮಾರ್ಕ 10:28-31; ಲೂಕ 18:28-30
ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
ಮತ್ತಾಯನು 19 : 28 (IRVKN)
ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ[* ಲೂಕ 22:30; ಪ್ರಕ 3: 21 ]ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
ಮತ್ತಾಯನು 19 : 29 (IRVKN)
ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
ಮತ್ತಾಯನು 19 : 30 (IRVKN)
ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30