ಮತ್ತಾಯನು 20 : 1 (IRVKN)
ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
ಮತ್ತಾಯನು 20 : 2 (IRVKN)
ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
ಮತ್ತಾಯನು 20 : 3 (IRVKN)
ಅವನು ಪುನಃ ಸುಮಾರು* ಮೂಲ: ಮೂರು ಗಂಟೆಗೆ ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
ಮತ್ತಾಯನು 20 : 4 (IRVKN)
ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
ಮತ್ತಾಯನು 20 : 5 (IRVKN)
ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು† ಮೂಲ: ಆರು ಗಂಟೆಗೆ ಮತ್ತು ಒಂಭತ್ತು ಗಂಟೆಗೆ. ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
ಮತ್ತಾಯನು 20 : 6 (IRVKN)
ಮತ್ತೊಂದು ಸಾರಿ‡ ಮೂಲ: ಹನ್ನೊಂದು ಗಂಟೆಗೆ. ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
ಮತ್ತಾಯನು 20 : 7 (IRVKN)
ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
ಮತ್ತಾಯನು 20 : 8 (IRVKN)
ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
ಮತ್ತಾಯನು 20 : 9 (IRVKN)
ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
ಮತ್ತಾಯನು 20 : 10 (IRVKN)
ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
ಮತ್ತಾಯನು 20 : 11 (IRVKN)
ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
ಮತ್ತಾಯನು 20 : 12 (IRVKN)
‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
ಮತ್ತಾಯನು 20 : 13 (IRVKN)
ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
ಮತ್ತಾಯನು 20 : 14 (IRVKN)
ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
ಮತ್ತಾಯನು 20 : 15 (IRVKN)
ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
ಮತ್ತಾಯನು 20 : 16 (IRVKN)
ಹೀಗೆ[§ ಮತ್ತಾ 19: 30 ]ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
ಮತ್ತಾಯನು 20 : 17 (IRVKN)
ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
ಮಾರ್ಕ 10:32-34; ಲೂಕ 18:31-35 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
ಮತ್ತಾಯನು 20 : 18 (IRVKN)
“ನೋಡಿರಿ[* ಮತ್ತಾ 16:21; ಲೂಕ 9: 22 ]ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
ಮತ್ತಾಯನು 20 : 19 (IRVKN)
ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು[† ಹೋಶೇ. 6: 2 ]ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
ಮತ್ತಾಯನು 20 : 20 (IRVKN)
ಯಾಕೋಬ, ಯೋಹಾನರ ತಾಯಿಯ ಬೇಡಿಕೆ
ಮಾರ್ಕ 10:35-45 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
ಮತ್ತಾಯನು 20 : 21 (IRVKN)
ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
ಮತ್ತಾಯನು 20 : 22 (IRVKN)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
ಮತ್ತಾಯನು 20 : 23 (IRVKN)
ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
ಮತ್ತಾಯನು 20 : 24 (IRVKN)
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
ಮತ್ತಾಯನು 20 : 25 (IRVKN)
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ[‡ ಲೂಕ 22:25- 27 ]ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
ಮತ್ತಾಯನು 20 : 26 (IRVKN)
ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
ಮತ್ತಾಯನು 20 : 27 (IRVKN)
ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
ಮತ್ತಾಯನು 20 : 28 (IRVKN)
ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
ಮತ್ತಾಯನು 20 : 29 (IRVKN)
ಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದು
ಮಾರ್ಕ 10:46-52; ಲೂಕ 18:35-43 ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
ಮತ್ತಾಯನು 20 : 30 (IRVKN)
ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
ಮತ್ತಾಯನು 20 : 31 (IRVKN)
ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
ಮತ್ತಾಯನು 20 : 32 (IRVKN)
ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
ಮತ್ತಾಯನು 20 : 33 (IRVKN)
ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
ಮತ್ತಾಯನು 20 : 34 (IRVKN)
ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34