ಮತ್ತಾಯನು 21 : 1 (IRVKN)
{ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು} (ಮಾರ್ಕ 11:1-11; ಲೂಕ 10:29-40; ಯೋಹಾ 12:12-19) [PS] ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
ಮತ್ತಾಯನು 21 : 2 (IRVKN)
ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
ಮತ್ತಾಯನು 21 : 3 (IRVKN)
ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.
ಮತ್ತಾಯನು 21 : 4 (IRVKN)
ಪ್ರವಾದಿಯ [* ಯೆಶಾಯ] ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,
ಮತ್ತಾಯನು 21 : 5 (IRVKN)
[† ಯೆಶಾ 62:11; ಜೆಕ. 9:9] “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
ಮತ್ತಾಯನು 21 : 6 (IRVKN)
ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
ಮತ್ತಾಯನು 21 : 7 (IRVKN)
ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.
ಮತ್ತಾಯನು 21 : 8 (IRVKN)
ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
ಮತ್ತಾಯನು 21 : 9 (IRVKN)
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, [QBR] [‡ ದಾವೀದನ ಕುಮಾರನೇ ರಕ್ಷಿಸು.] “ದಾವೀದನ ಕುಮಾರನಿಗೆ ಹೊಸನ್ನ! [QBR] [§ ಕೀರ್ತ 118:25, 26] ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! [QBR] ಮೇಲಣ ಲೋಕಗಳಲ್ಲಿ [* ರಕ್ಷಿಸು.] ಹೊಸನ್ನ!” ಎಂದು ಆರ್ಭಟಿಸಿದರು.
ಮತ್ತಾಯನು 21 : 10 (IRVKN)
ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.
ಮತ್ತಾಯನು 21 : 11 (IRVKN)
ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು. ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು (ಮಾರ್ಕ 11:11-24; ಲೂಕ 19:45-48) [PS]
ಮತ್ತಾಯನು 21 : 12 (IRVKN)
ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
ಮತ್ತಾಯನು 21 : 13 (IRVKN)
ಆತನು ಅವರಿಗೆ, [† ಯೆಶಾ 56:7] “ ‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ [‡ ಯೆರೆ 7:11] ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
ಮತ್ತಾಯನು 21 : 14 (IRVKN)
ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
ಮತ್ತಾಯನು 21 : 15 (IRVKN)
ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
ಮತ್ತಾಯನು 21 : 16 (IRVKN)
ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
ಮತ್ತಾಯನು 21 : 17 (IRVKN)
ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು. [PE][PS]
ಮತ್ತಾಯನು 21 : 18 (IRVKN)
ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.
ಮತ್ತಾಯನು 21 : 19 (IRVKN)
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
ಮತ್ತಾಯನು 21 : 20 (IRVKN)
ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
ಮತ್ತಾಯನು 21 : 21 (IRVKN)
ಅದಕ್ಕೆ ಯೇಸು, [§ ಮತ್ತಾ 7:7; 17:20; ಅ. ಕೃ. 10:20; ರೋಮಾ. 4:20; ಯಾಕೋಬ 1:6] “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
ಮತ್ತಾಯನು 21 : 22 (IRVKN)
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು. [PS]
ಮತ್ತಾಯನು 21 : 23 (IRVKN)
{ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು} (ಮಾರ್ಕ 11:27-12:12; ಲೂಕ 20:1-19; 14:16-24) [PS] ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
ಮತ್ತಾಯನು 21 : 24 (IRVKN)
ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
ಮತ್ತಾಯನು 21 : 25 (IRVKN)
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “ ‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
ಮತ್ತಾಯನು 21 : 26 (IRVKN)
‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಮತ್ತಾಯನು 21 : 27 (IRVKN)
ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
ಮತ್ತಾಯನು 21 : 28 (IRVKN)
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
ಮತ್ತಾಯನು 21 : 29 (IRVKN)
ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
ಮತ್ತಾಯನು 21 : 30 (IRVKN)
ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
ಮತ್ತಾಯನು 21 : 31 (IRVKN)
ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’ ” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 21 : 32 (IRVKN)
ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ. [PE][PS]
ಮತ್ತಾಯನು 21 : 33 (IRVKN)
“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು [* ಯೆಶಾ 5:1,2] ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು [† ಕೋರಿಗೆ] ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
ಮತ್ತಾಯನು 21 : 34 (IRVKN)
ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
ಮತ್ತಾಯನು 21 : 35 (IRVKN)
ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
ಮತ್ತಾಯನು 21 : 36 (IRVKN)
ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
ಮತ್ತಾಯನು 21 : 37 (IRVKN)
ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
ಮತ್ತಾಯನು 21 : 38 (IRVKN)
ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
ಮತ್ತಾಯನು 21 : 39 (IRVKN)
ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.
ಮತ್ತಾಯನು 21 : 40 (IRVKN)
ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.
ಮತ್ತಾಯನು 21 : 41 (IRVKN)
ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
ಮತ್ತಾಯನು 21 : 42 (IRVKN)
ಯೇಸು ಅವರಿಗೆ, [‡ ಕೀರ್ತ 118:22-23] “ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
ಮತ್ತಾಯನು 21 : 43 (IRVKN)
ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
ಮತ್ತಾಯನು 21 : 44 (IRVKN)
[§ ಕೆಲವು ಪತ್ರಿಗಳಲ್ಲಿ 44 ನೆಯ ವಚನವಿಲ್ಲ; ಯೆಶಾ 8:14-15; ದಾನಿ. 2:34-35, 44] ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.
ಮತ್ತಾಯನು 21 : 45 (IRVKN)
ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
ಮತ್ತಾಯನು 21 : 46 (IRVKN)
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46

BG:

Opacity:

Color:


Size:


Font: