ಮತ್ತಾಯನು 22 : 1 (IRVKN)
ಮದುವೆ ಔತಣದ ಸಾಮ್ಯ ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ* ಶಾಸ್ತ್ರಿಗಳು ಹೇಳಿದ್ದೇನೆಂದರೆ,
ಮತ್ತಾಯನು 22 : 2 (IRVKN)
“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
ಮತ್ತಾಯನು 22 : 3 (IRVKN)
ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
ಮತ್ತಾಯನು 22 : 4 (IRVKN)
ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
ಮತ್ತಾಯನು 22 : 5 (IRVKN)
ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
ಮತ್ತಾಯನು 22 : 6 (IRVKN)
ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
ಮತ್ತಾಯನು 22 : 7 (IRVKN)
ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಮತ್ತಾಯನು 22 : 8 (IRVKN)
ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
ಮತ್ತಾಯನು 22 : 9 (IRVKN)
ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
ಮತ್ತಾಯನು 22 : 10 (IRVKN)
ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
ಮತ್ತಾಯನು 22 : 11 (IRVKN)
ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
ಮತ್ತಾಯನು 22 : 12 (IRVKN)
ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
ಮತ್ತಾಯನು 22 : 13 (IRVKN)
ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
ಮತ್ತಾಯನು 22 : 14 (IRVKN)
ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
ಮತ್ತಾಯನು 22 : 15 (IRVKN)
ಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದು
ಮಾರ್ಕ 12:13-37; ಲೂಕ 20:20-44
ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
ಮತ್ತಾಯನು 22 : 16 (IRVKN)
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
ಮತ್ತಾಯನು 22 : 17 (IRVKN)
ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
ಮತ್ತಾಯನು 22 : 18 (IRVKN)
ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
ಮತ್ತಾಯನು 22 : 19 (IRVKN)
ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
ಮತ್ತಾಯನು 22 : 20 (IRVKN)
ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
ಮತ್ತಾಯನು 22 : 21 (IRVKN)
ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, ರೋಮಾ. 13:7 “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
ಮತ್ತಾಯನು 22 : 22 (IRVKN)
ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
ಮತ್ತಾಯನು 22 : 23 (IRVKN)
ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
ಮತ್ತಾಯನು 22 : 24 (IRVKN)
ಇವರು ಆತನಿಗೆ, “ಬೋಧಕನೇ, ಧರ್ಮೋ 25:5 ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
ಮತ್ತಾಯನು 22 : 25 (IRVKN)
ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
ಮತ್ತಾಯನು 22 : 26 (IRVKN)
ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
ಮತ್ತಾಯನು 22 : 27 (IRVKN)
ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
ಮತ್ತಾಯನು 22 : 28 (IRVKN)
ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
ಮತ್ತಾಯನು 22 : 29 (IRVKN)
ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, § ಯೋಹಾ 20:9; 1 ಕೊರಿ 6:14 “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
ಮತ್ತಾಯನು 22 : 30 (IRVKN)
ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
ಮತ್ತಾಯನು 22 : 31 (IRVKN)
ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
ಮತ್ತಾಯನು 22 : 32 (IRVKN)
* ವಿಮೋ 3:6 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
ಮತ್ತಾಯನು 22 : 33 (IRVKN)
ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
ಮತ್ತಾಯನು 22 : 34 (IRVKN)
ಮುಖ್ಯವಾದ ಆಜ್ಞೆ ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
ಮತ್ತಾಯನು 22 : 35 (IRVKN)
ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
ಮತ್ತಾಯನು 22 : 36 (IRVKN)
“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
ಮತ್ತಾಯನು 22 : 37 (IRVKN)
ಯೇಸು ಅವನಿಗೆ, ಧರ್ಮೋ 6:5 “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
ಮತ್ತಾಯನು 22 : 38 (IRVKN)
ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
ಮತ್ತಾಯನು 22 : 39 (IRVKN)
ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ಯಾಜ 19:18 ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
ಮತ್ತಾಯನು 22 : 40 (IRVKN)
ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
ಮತ್ತಾಯನು 22 : 41 (IRVKN)
ದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದು ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
ಮತ್ತಾಯನು 22 : 42 (IRVKN)
“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
ಮತ್ತಾಯನು 22 : 43 (IRVKN)
ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
ಮತ್ತಾಯನು 22 : 44 (IRVKN)
§ ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
ಮತ್ತಾಯನು 22 : 45 (IRVKN)
45 ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
ಮತ್ತಾಯನು 22 : 46 (IRVKN)
ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46