ಮತ್ತಾಯನು 23 : 1 (IRVKN)
ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
ಮತ್ತಾಯನು 23 : 2 (IRVKN)
“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ [* ಮೋಶೆಯ ಅಧಿಕಾರದಲ್ಲಿ] ಕುಳಿತುಕೊಂಡಿದ್ದಾರೆ;
ಮತ್ತಾಯನು 23 : 3 (IRVKN)
ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
ಮತ್ತಾಯನು 23 : 4 (IRVKN)
[† ಯಾರು ಹೊರಲಾರದಂಥ] ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು [‡ ಕದಲಿಸಲೊಲ್ಲರು] ಮುಟ್ಟಲೊಲ್ಲರು.
ಮತ್ತಾಯನು 23 : 5 (IRVKN)
ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ [§ ಧರ್ಮೋ 6:8; 11, 18] ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
ಮತ್ತಾಯನು 23 : 6 (IRVKN)
ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
ಮತ್ತಾಯನು 23 : 7 (IRVKN)
ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.
ಮತ್ತಾಯನು 23 : 8 (IRVKN)
ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
ಮತ್ತಾಯನು 23 : 9 (IRVKN)
ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
ಮತ್ತಾಯನು 23 : 10 (IRVKN)
ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
ಮತ್ತಾಯನು 23 : 11 (IRVKN)
ಆದರೆ [* ಮತ್ತಾ 20:26; ಮಾರ್ಕ 9:35] ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
ಮತ್ತಾಯನು 23 : 12 (IRVKN)
ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. [PE][PS]
ಮತ್ತಾಯನು 23 : 13 (IRVKN)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
ಮತ್ತಾಯನು 23 : 14 (IRVKN)
ಅಯ್ಯೋ, ಕಪಟಿಗಳಾದ [† 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47] ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. [PE][PS]
ಮತ್ತಾಯನು 23 : 15 (IRVKN)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. [PE][PS]
ಮತ್ತಾಯನು 23 : 16 (IRVKN)
“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
ಮತ್ತಾಯನು 23 : 17 (IRVKN)
ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?
ಮತ್ತಾಯನು 23 : 18 (IRVKN)
ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
ಮತ್ತಾಯನು 23 : 19 (IRVKN)
ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?
ಮತ್ತಾಯನು 23 : 20 (IRVKN)
ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
ಮತ್ತಾಯನು 23 : 21 (IRVKN)
ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
ಮತ್ತಾಯನು 23 : 22 (IRVKN)
ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
ಮತ್ತಾಯನು 23 : 23 (IRVKN)
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
ಮತ್ತಾಯನು 23 : 24 (IRVKN)
ಕುರುಡ ಮಾರ್ಗದರ್ಶಿಗಳೇ, ನೀವು [‡ ಗುಂಗರೆ] ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. [PE][PS]
ಮತ್ತಾಯನು 23 : 25 (IRVKN)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
ಮತ್ತಾಯನು 23 : 26 (IRVKN)
ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. [PE][PS]
ಮತ್ತಾಯನು 23 : 27 (IRVKN)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
ಮತ್ತಾಯನು 23 : 28 (IRVKN)
ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
ಮತ್ತಾಯನು 23 : 29 (IRVKN)
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
ಮತ್ತಾಯನು 23 : 30 (IRVKN)
‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
ಮತ್ತಾಯನು 23 : 31 (IRVKN)
ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಮತ್ತಾಯನು 23 : 32 (IRVKN)
ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
ಮತ್ತಾಯನು 23 : 33 (IRVKN)
ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
ಮತ್ತಾಯನು 23 : 34 (IRVKN)
ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
ಮತ್ತಾಯನು 23 : 35 (IRVKN)
[§ ಆದಿ 4:8; 2 ಪೂರ್ವ 24:20,21; ಪ್ರಕ 18:24] ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
ಮತ್ತಾಯನು 23 : 36 (IRVKN)
ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. [PE][PS]
ಮತ್ತಾಯನು 23 : 37 (IRVKN)
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! [* ಧರ್ಮೋ 32:11; ರೂತ 2:12] ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
ಮತ್ತಾಯನು 23 : 38 (IRVKN)
ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
ಮತ್ತಾಯನು 23 : 39 (IRVKN)
ಈಗಿಂದ, [† ಕೀರ್ತ 118:26] ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’ ” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: