ಮತ್ತಾಯನು 24 : 1 (IRVKN)
ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು
ಮಾರ್ಕ 13:1-31; ಲೂಕ 21:5-33
ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
ಮತ್ತಾಯನು 24 : 2 (IRVKN)
ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
ಮತ್ತಾಯನು 24 : 3 (IRVKN)
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ * ಕ್ರಿಸ್ತನ ಮರುಬರೋಣ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
ಮತ್ತಾಯನು 24 : 4 (IRVKN)
ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
ಮತ್ತಾಯನು 24 : 5 (IRVKN)
ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಮತ್ತಾಯನು 24 : 6 (IRVKN)
ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
ಮತ್ತಾಯನು 24 : 7 (IRVKN)
ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
ಮತ್ತಾಯನು 24 : 8 (IRVKN)
ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
ಮತ್ತಾಯನು 24 : 9 (IRVKN)
“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
ಮತ್ತಾಯನು 24 : 10 (IRVKN)
ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.
ಮತ್ತಾಯನು 24 : 11 (IRVKN)
ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
ಮತ್ತಾಯನು 24 : 12 (IRVKN)
ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
ಮತ್ತಾಯನು 24 : 13 (IRVKN)
ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
ಮತ್ತಾಯನು 24 : 14 (IRVKN)
ಇದಲ್ಲದೆ ಮತ್ತಾ 4:23; ರೋಮಾ 10:18 ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
ಮತ್ತಾಯನು 24 : 15 (IRVKN)
“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ದಾನಿ. 9:27; 11:31; 12:11 ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
ಮತ್ತಾಯನು 24 : 16 (IRVKN)
ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
ಮತ್ತಾಯನು 24 : 17 (IRVKN)
ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,
ಮತ್ತಾಯನು 24 : 18 (IRVKN)
ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.
ಮತ್ತಾಯನು 24 : 19 (IRVKN)
ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.
ಮತ್ತಾಯನು 24 : 20 (IRVKN)
ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
ಮತ್ತಾಯನು 24 : 21 (IRVKN)
ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
ಮತ್ತಾಯನು 24 : 22 (IRVKN)
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
ಮತ್ತಾಯನು 24 : 23 (IRVKN)
ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.
ಮತ್ತಾಯನು 24 : 24 (IRVKN)
ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
ಮತ್ತಾಯನು 24 : 25 (IRVKN)
ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
ಮತ್ತಾಯನು 24 : 26 (IRVKN)
ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
ಮತ್ತಾಯನು 24 : 27 (IRVKN)
ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
ಮತ್ತಾಯನು 24 : 28 (IRVKN)
§ ಯೋಬ 39:30; ಲೂಕ 17:37 ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
ಮತ್ತಾಯನು 24 : 29 (IRVKN)
“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
ಮತ್ತಾಯನು 24 : 30 (IRVKN)
ಆಗ* ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7 ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
ಮತ್ತಾಯನು 24 : 31 (IRVKN)
ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
ಮತ್ತಾಯನು 24 : 32 (IRVKN)
ಅಂಜೂರ ಮರದ ದೃಷ್ಟಾಂತ “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
ಮತ್ತಾಯನು 24 : 33 (IRVKN)
ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆತನು ಹತ್ತಿರದಲ್ಲಿದ್ದಾನೆ, ಬಾಗಿಲಲ್ಲೇ ಇದ್ದಾನೆ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
ಮತ್ತಾಯನು 24 : 34 (IRVKN)
ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 24 : 35 (IRVKN)
ಕೀರ್ತ 102:26; 27; ಯೆಶಾ 51:6; 1 ಪೇತ್ರ 1:25 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
ಮತ್ತಾಯನು 24 : 36 (IRVKN)
ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
ಮಾರ್ಕ 13:32-37; ಲೂಕ 21:34-36; 19:12-27
“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
ಮತ್ತಾಯನು 24 : 37 (IRVKN)
§ ಲೂಕ 17:26-30; 34-36 ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.
ಮತ್ತಾಯನು 24 : 38 (IRVKN)
ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
ಮತ್ತಾಯನು 24 : 39 (IRVKN)
ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
ಮತ್ತಾಯನು 24 : 40 (IRVKN)
ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.
ಮತ್ತಾಯನು 24 : 41 (IRVKN)
ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
ಮತ್ತಾಯನು 24 : 42 (IRVKN)
“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
ಮತ್ತಾಯನು 24 : 43 (IRVKN)
* ಲೂಕ 12:39-46 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
ಮತ್ತಾಯನು 24 : 44 (IRVKN)
ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಮತ್ತಾಯನು 24 : 45 (IRVKN)
ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
ಮತ್ತಾಯನು 24 : 46 (IRVKN)
ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.
ಮತ್ತಾಯನು 24 : 47 (IRVKN)
ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತಾಯನು 24 : 48 (IRVKN)
ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
ಮತ್ತಾಯನು 24 : 49 (IRVKN)
ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,
ಮತ್ತಾಯನು 24 : 50 (IRVKN)
ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ
ಮತ್ತಾಯನು 24 : 51 (IRVKN)
ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51