ಮತ್ತಾಯನು 25 : 1 (IRVKN)
{ಹತ್ತುಮಂದಿ ಕನ್ಯೆಯರ ಸಾಮ್ಯ} [PS] “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು [* ದೀವಟಿಗೆಗಳನ್ನು] ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
ಮತ್ತಾಯನು 25 : 2 (IRVKN)
ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.
ಮತ್ತಾಯನು 25 : 3 (IRVKN)
ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
ಮತ್ತಾಯನು 25 : 4 (IRVKN)
ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
ಮತ್ತಾಯನು 25 : 5 (IRVKN)
ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
ಮತ್ತಾಯನು 25 : 6 (IRVKN)
ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
ಮತ್ತಾಯನು 25 : 7 (IRVKN)
ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.
ಮತ್ತಾಯನು 25 : 8 (IRVKN)
ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
ಮತ್ತಾಯನು 25 : 9 (IRVKN)
ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
ಮತ್ತಾಯನು 25 : 10 (IRVKN)
ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
ಮತ್ತಾಯನು 25 : 11 (IRVKN)
ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.
ಮತ್ತಾಯನು 25 : 12 (IRVKN)
ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
ಮತ್ತಾಯನು 25 : 13 (IRVKN)
[† ಮತ್ತಾ 24:42] ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ. [PS]
ಮತ್ತಾಯನು 25 : 14 (IRVKN)
{ತಲಾಂತುಗಳ ಸಾಮ್ಯ} [PS] “ದೇವರ ರಾಜ್ಯವು ಹೇಗೆಂದರೆ [‡ ಲೂಕ 9:12-27] ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
ಮತ್ತಾಯನು 25 : 15 (IRVKN)
ಅವನು ಒಬ್ಬನಿಗೆ ಐದು [§ 3,000 ರೂಪಾಯಿ] ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
ಮತ್ತಾಯನು 25 : 16 (IRVKN)
ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
ಮತ್ತಾಯನು 25 : 17 (IRVKN)
ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.
ಮತ್ತಾಯನು 25 : 18 (IRVKN)
ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
ಮತ್ತಾಯನು 25 : 19 (IRVKN)
ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು
ಮತ್ತಾಯನು 25 : 20 (IRVKN)
ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
ಮತ್ತಾಯನು 25 : 21 (IRVKN)
ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
ಮತ್ತಾಯನು 25 : 22 (IRVKN)
ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
ಮತ್ತಾಯನು 25 : 23 (IRVKN)
ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
ಮತ್ತಾಯನು 25 : 24 (IRVKN)
ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
ಮತ್ತಾಯನು 25 : 25 (IRVKN)
ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.
ಮತ್ತಾಯನು 25 : 26 (IRVKN)
ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
ಮತ್ತಾಯನು 25 : 27 (IRVKN)
ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
ಮತ್ತಾಯನು 25 : 28 (IRVKN)
ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.
ಮತ್ತಾಯನು 25 : 29 (IRVKN)
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
ಮತ್ತಾಯನು 25 : 30 (IRVKN)
ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’ [PE][PS]
ಮತ್ತಾಯನು 25 : 31 (IRVKN)
[* ಯೋವೇ. 3:12] “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
ಮತ್ತಾಯನು 25 : 32 (IRVKN)
ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
ಮತ್ತಾಯನು 25 : 33 (IRVKN)
ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
ಮತ್ತಾಯನು 25 : 34 (IRVKN)
ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
ಮತ್ತಾಯನು 25 : 35 (IRVKN)
ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
ಮತ್ತಾಯನು 25 : 36 (IRVKN)
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
ಮತ್ತಾಯನು 25 : 37 (IRVKN)
ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
ಮತ್ತಾಯನು 25 : 38 (IRVKN)
ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
ಮತ್ತಾಯನು 25 : 39 (IRVKN)
ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
ಮತ್ತಾಯನು 25 : 40 (IRVKN)
ಅದಕ್ಕೆ ಉತ್ತರವಾಗಿ ಅರಸನು, [† ಮತ್ತಾ 10:42] ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
ಮತ್ತಾಯನು 25 : 41 (IRVKN)
ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
ಮತ್ತಾಯನು 25 : 42 (IRVKN)
ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
ಮತ್ತಾಯನು 25 : 43 (IRVKN)
ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
ಮತ್ತಾಯನು 25 : 44 (IRVKN)
ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
ಮತ್ತಾಯನು 25 : 45 (IRVKN)
ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
ಮತ್ತಾಯನು 25 : 46 (IRVKN)
ಮತ್ತು ಅನೀತಿವಂತರಾದ ಇವರು [‡ ದಾನಿ. 12:2; ಯೋಹಾ 5:29] ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46

BG:

Opacity:

Color:


Size:


Font: