ಮತ್ತಾಯನು 26 : 1 (IRVKN)
ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು
ಮಾರ್ಕ 14:1-11; ಲೂಕ 22:1-6; ಯೋಹಾ 12:1-8
ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;
ಮತ್ತಾಯನು 26 : 2 (IRVKN)
ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.
ಮತ್ತಾಯನು 26 : 3 (IRVKN)
ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು
ಮತ್ತಾಯನು 26 : 4 (IRVKN)
ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
ಮತ್ತಾಯನು 26 : 5 (IRVKN)
“ಆದರೂ ಹಬ್ಬದಲ್ಲಿ* ಪಸ್ಕ ಹಬ್ಬ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.
ಮತ್ತಾಯನು 26 : 6 (IRVKN)
ಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯ್ಯಿದದ್ದು ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು
ಮತ್ತಾಯನು 26 : 7 (IRVKN)
ಚಂದ್ರಕಾಂತಶಿಲೆಯ ಭರಣಿಯನ್ನು ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.
ಮತ್ತಾಯನು 26 : 8 (IRVKN)
ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?
ಮತ್ತಾಯನು 26 : 9 (IRVKN)
ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.
ಮತ್ತಾಯನು 26 : 10 (IRVKN)
ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
ಮತ್ತಾಯನು 26 : 11 (IRVKN)
ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
ಮತ್ತಾಯನು 26 : 12 (IRVKN)
ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.
ಮತ್ತಾಯನು 26 : 13 (IRVKN)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
ಮತ್ತಾಯನು 26 : 14 (IRVKN)
ಇಸ್ಕರಿಯೋತನು ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
ಮತ್ತಾಯನು 26 : 15 (IRVKN)
“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
ಮತ್ತಾಯನು 26 : 16 (IRVKN)
ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
ಮತ್ತಾಯನು 26 : 17 (IRVKN)
ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು
ಮಾರ್ಕ 14:12-31; ಲೂಕ 22:7-34; ಯೋಹಾ 13:21-26
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
ಮತ್ತಾಯನು 26 : 18 (IRVKN)
ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.
ಮತ್ತಾಯನು 26 : 19 (IRVKN)
ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.
ಮತ್ತಾಯನು 26 : 20 (IRVKN)
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.
ಮತ್ತಾಯನು 26 : 21 (IRVKN)
ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.
ಮತ್ತಾಯನು 26 : 22 (IRVKN)
ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.
ಮತ್ತಾಯನು 26 : 23 (IRVKN)
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.
ಮತ್ತಾಯನು 26 : 24 (IRVKN)
ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
ಮತ್ತಾಯನು 26 : 25 (IRVKN)
ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
ಮತ್ತಾಯನು 26 : 26 (IRVKN)
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.
ಮತ್ತಾಯನು 26 : 27 (IRVKN)
ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,
ಮತ್ತಾಯನು 26 : 28 (IRVKN)
ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಹೊಸ ಒಡಂಬಡಿಕೆಯ ಒಡಂಬಡಿಕೆಯ ರಕ್ತ.
ಮತ್ತಾಯನು 26 : 29 (IRVKN)
ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
ಮತ್ತಾಯನು 26 : 30 (IRVKN)
ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.
ಮತ್ತಾಯನು 26 : 31 (IRVKN)
ಆಗ ಯೇಸು, ಅವರಿಗೆ, § ಜೆಕ. 13:7 “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
ಮತ್ತಾಯನು 26 : 32 (IRVKN)
“ಆದರೆ ನಾನು ಜೀವಿತನಾಗಿ ಎದ್ದ ಮೇಲೆ* ಮತ್ತಾ 28:7, 10, 16; ಮಾರ್ಕ 16:7 ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
ಮತ್ತಾಯನು 26 : 33 (IRVKN)
ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
ಮತ್ತಾಯನು 26 : 34 (IRVKN)
ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.
ಮತ್ತಾಯನು 26 : 35 (IRVKN)
ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.
ಮತ್ತಾಯನು 26 : 36 (IRVKN)
ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು
ಮಾರ್ಕ 14:32-50; ಲೂಕ 22:40-53; ಯೋಹಾ 18:1-12
ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
ಮತ್ತಾಯನು 26 : 37 (IRVKN)
ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
ಮತ್ತಾಯನು 26 : 38 (IRVKN)
ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
ಮತ್ತಾಯನು 26 : 39 (IRVKN)
ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ಇಬ್ರಿ. 5:7 “ನನ್ನ ತಂದೆಯೇ, ಸಾಧ್ಯವಾದರೆ ಈ ಕಷ್ಟಾನುಭವ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
ಮತ್ತಾಯನು 26 : 40 (IRVKN)
ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
ಮತ್ತಾಯನು 26 : 41 (IRVKN)
§ ಮಾರ್ಕ 13:33; ಕೊಲೊ 4:2 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
ಮತ್ತಾಯನು 26 : 42 (IRVKN)
ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
ಮತ್ತಾಯನು 26 : 43 (IRVKN)
ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.
ಮತ್ತಾಯನು 26 : 44 (IRVKN)
ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.
ಮತ್ತಾಯನು 26 : 45 (IRVKN)
ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
ಮತ್ತಾಯನು 26 : 46 (IRVKN)
ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
ಮತ್ತಾಯನು 26 : 47 (IRVKN)
ಶತ್ರುಗಳು ಯೇಸುವನ್ನು ಹಿಡಿದದ್ದು ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
ಮತ್ತಾಯನು 26 : 48 (IRVKN)
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
ಮತ್ತಾಯನು 26 : 49 (IRVKN)
ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಮತ್ತಾಯನು 26 : 50 (IRVKN)
ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
ಮತ್ತಾಯನು 26 : 51 (IRVKN)
ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
ಮತ್ತಾಯನು 26 : 52 (IRVKN)
ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
ಮತ್ತಾಯನು 26 : 53 (IRVKN)
ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
ಮತ್ತಾಯನು 26 : 54 (IRVKN)
ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.
ಮತ್ತಾಯನು 26 : 55 (IRVKN)
ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;
ಮತ್ತಾಯನು 26 : 56 (IRVKN)
ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಮತ್ತಾಯನು 26 : 57 (IRVKN)
ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು
ಮಾರ್ಕ 14:53-72; ಲೂಕ 22:54-71; ಯೋಹಾ 18:12-27
ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
ಮತ್ತಾಯನು 26 : 58 (IRVKN)
ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
ಮತ್ತಾಯನು 26 : 59 (IRVKN)
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
ಮತ್ತಾಯನು 26 : 60 (IRVKN)
ಅನಂತರ ಇಬ್ಬರು ಮುಂದೆ ಬಂದು,
ಮತ್ತಾಯನು 26 : 61 (IRVKN)
“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’ ” ಅಂದರು;
ಮತ್ತಾಯನು 26 : 62 (IRVKN)
ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
ಮತ್ತಾಯನು 26 : 63 (IRVKN)
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
ಮತ್ತಾಯನು 26 : 64 (IRVKN)
ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ* ಮತ್ತಾ 16:7; ಕೀರ್ತ 110:1 ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
ಮತ್ತಾಯನು 26 : 65 (IRVKN)
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
ಮತ್ತಾಯನು 26 : 66 (IRVKN)
ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.
ಮತ್ತಾಯನು 26 : 67 (IRVKN)
ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
ಮತ್ತಾಯನು 26 : 68 (IRVKN)
“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.
ಮತ್ತಾಯನು 26 : 69 (IRVKN)
ಪೇತ್ರನು ಯೇಸುವನ್ನು ಅರಿಯೆನೆಂದು ಹೇಳಿದ್ದು ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
ಮತ್ತಾಯನು 26 : 70 (IRVKN)
ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.
ಮತ್ತಾಯನು 26 : 71 (IRVKN)
ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
ಮತ್ತಾಯನು 26 : 72 (IRVKN)
ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.
ಮತ್ತಾಯನು 26 : 73 (IRVKN)
ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
ಮತ್ತಾಯನು 26 : 74 (IRVKN)
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
ಮತ್ತಾಯನು 26 : 75 (IRVKN)
ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72 73 74 75