ಮತ್ತಾಯನು 27 : 1 (IRVKN)
ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
ಮತ್ತಾಯನು 27 : 2 (IRVKN)
ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.
ಮತ್ತಾಯನು 27 : 3 (IRVKN)
ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ * ಮತ್ತಾ 26:14-15 ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
ಮತ್ತಾಯನು 27 : 4 (IRVKN)
“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
ಮತ್ತಾಯನು 27 : 5 (IRVKN)
ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.
ಮತ್ತಾಯನು 27 : 6 (IRVKN)
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
ಮತ್ತಾಯನು 27 : 7 (IRVKN)
ಬಳಿಕ ಆಲೋಚನೆಮಾಡಿ ಅ. ಕೃ. 1:18,19 ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
ಮತ್ತಾಯನು 27 : 8 (IRVKN)
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ರಕ್ತದ ಹೊಲವೆಂದು ಹೊಲವೆಂಬ” ಹೆಸರು ಇದೆ.
ಮತ್ತಾಯನು 27 : 9 (IRVKN)
ಅದೇನೆಂದರೆ, § ಜೆಕ. 11:12,13 “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
ಮತ್ತಾಯನು 27 : 10 (IRVKN)
ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
ಮತ್ತಾಯನು 27 : 11 (IRVKN)
ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು
ಮಾರ್ಕ 15:2-15; ಲೂಕ 23:2,3,13-25; ಯೋಹಾ 18:29-40; 19:16
ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
ಮತ್ತಾಯನು 27 : 12 (IRVKN)
ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
ಮತ್ತಾಯನು 27 : 13 (IRVKN)
ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.
ಮತ್ತಾಯನು 27 : 14 (IRVKN)
ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
ಮತ್ತಾಯನು 27 : 15 (IRVKN)
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
ಮತ್ತಾಯನು 27 : 16 (IRVKN)
ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.
ಮತ್ತಾಯನು 27 : 17 (IRVKN)
ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
ಮತ್ತಾಯನು 27 : 18 (IRVKN)
ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
ಮತ್ತಾಯನು 27 : 19 (IRVKN)
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
ಮತ್ತಾಯನು 27 : 20 (IRVKN)
ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
ಮತ್ತಾಯನು 27 : 21 (IRVKN)
ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
ಮತ್ತಾಯನು 27 : 22 (IRVKN)
ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
ಮತ್ತಾಯನು 27 : 23 (IRVKN)
ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
ಮತ್ತಾಯನು 27 : 24 (IRVKN)
ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ * ಮತ್ತಾ 26:5 ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು † ಧರ್ಮೋ 21:6-8 ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ‡ ರಕ್ತದಲ್ಲಿ ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
ಮತ್ತಾಯನು 27 : 25 (IRVKN)
ಜನರೆಲ್ಲಾ, “§ ಆತನನ್ನು ಕೊಲ್ಲಿಸಿದ್ದ ಅಪರಾಧವು ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
ಮತ್ತಾಯನು 27 : 26 (IRVKN)
ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
ಮತ್ತಾಯನು 27 : 27 (IRVKN)
ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು
ಮಾರ್ಕ 15:16-41; ಲೂಕ 23:26,33-49; ಯೋಹಾ 19:2-3,16-30
ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
ಮತ್ತಾಯನು 27 : 28 (IRVKN)
ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,
ಮತ್ತಾಯನು 27 : 29 (IRVKN)
ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ
ಮತ್ತಾಯನು 27 : 30 (IRVKN)
ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
ಮತ್ತಾಯನು 27 : 31 (IRVKN)
ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
ಮತ್ತಾಯನು 27 : 32 (IRVKN)
ಗೊಲ್ಗೊಥಾಕ್ಕೆ ಪ್ರಯಾಣ ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
ಮತ್ತಾಯನು 27 : 33 (IRVKN)
ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ
ಮತ್ತಾಯನು 27 : 34 (IRVKN)
* ಕೀರ್ತ 69:21 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
ಮತ್ತಾಯನು 27 : 35 (IRVKN)
ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
ಮತ್ತಾಯನು 27 : 36 (IRVKN)
ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.
ಮತ್ತಾಯನು 27 : 37 (IRVKN)
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
ಮತ್ತಾಯನು 27 : 38 (IRVKN)
ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
ಮತ್ತಾಯನು 27 : 39 (IRVKN)
ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,
ಮತ್ತಾಯನು 27 : 40 (IRVKN)
“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
ಮತ್ತಾಯನು 27 : 41 (IRVKN)
ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
ಮತ್ತಾಯನು 27 : 42 (IRVKN)
ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
ಮತ್ತಾಯನು 27 : 43 (IRVKN)
ಅವನು ಕೀರ್ತ 22:8 ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’ ” ಎಂದು ಅಣಕಿಸಿ ಮಾತನಾಡುತ್ತಿದ್ದರು.
ಮತ್ತಾಯನು 27 : 44 (IRVKN)
ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
ಮತ್ತಾಯನು 27 : 45 (IRVKN)
ಯೇಸುವಿನ ಮರಣ 6 ತಾಸಿನಿಂದ 9 ತಾಸಿನ ತನಕ ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಮತ್ತಾಯನು 27 : 46 (IRVKN)
ಸುಮಾರು ಮೂರು ಘಂಟೆಗೆ ಯೇಸು, § ಕೀರ್ತ 22:1 “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
ಮತ್ತಾಯನು 27 : 47 (IRVKN)
ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.
ಮತ್ತಾಯನು 27 : 48 (IRVKN)
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
ಮತ್ತಾಯನು 27 : 49 (IRVKN)
ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು* ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ 19:34 .
ಮತ್ತಾಯನು 27 : 50 (IRVKN)
ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
ಮತ್ತಾಯನು 27 : 51 (IRVKN)
ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
ಮತ್ತಾಯನು 27 : 52 (IRVKN)
ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಸತ್ತುಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
ಮತ್ತಾಯನು 27 : 53 (IRVKN)
ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
ಮತ್ತಾಯನು 27 : 54 (IRVKN)
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದಾನಿ. 3:25 ದೇವಕುಮಾರನಾಗಿದ್ದನು” ಅಂದರು.
ಮತ್ತಾಯನು 27 : 55 (IRVKN)
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
ಮತ್ತಾಯನು 27 : 56 (IRVKN)
ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
ಮತ್ತಾಯನು 27 : 57 (IRVKN)
ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು
ಮಾರ್ಕ 15:42-47; ಲೂಕ 23:50-56; ಯೋಹಾ 19:38-42
ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
ಮತ್ತಾಯನು 27 : 58 (IRVKN)
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
ಮತ್ತಾಯನು 27 : 59 (IRVKN)
ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
ಮತ್ತಾಯನು 27 : 60 (IRVKN)
ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.
ಮತ್ತಾಯನು 27 : 61 (IRVKN)
ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
ಮತ್ತಾಯನು 27 : 62 (IRVKN)
ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
ಮತ್ತಾಯನು 27 : 63 (IRVKN)
“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
ಮತ್ತಾಯನು 27 : 64 (IRVKN)
ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
ಮತ್ತಾಯನು 27 : 65 (IRVKN)
ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು
ಮತ್ತಾಯನು 27 : 66 (IRVKN)
ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66