ಮತ್ತಾಯನು 28 : 1 (IRVKN)
{ಯೇಸುವಿನ ಪುನರುತ್ಥಾನ} (ಮಾರ್ಕ 16:1-10; ಲೂಕ 24:1-10; ಯೋಹಾ 20:1-18) [PS] ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ [* ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ] ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
ಮತ್ತಾಯನು 28 : 2 (IRVKN)
ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
ಮತ್ತಾಯನು 28 : 3 (IRVKN)
ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
ಮತ್ತಾಯನು 28 : 4 (IRVKN)
ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.
ಮತ್ತಾಯನು 28 : 5 (IRVKN)
ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
ಮತ್ತಾಯನು 28 : 6 (IRVKN)
ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
ಮತ್ತಾಯನು 28 : 7 (IRVKN)
ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, [† ಮತ್ತಾ 28:10,16; 26:32] ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
ಮತ್ತಾಯನು 28 : 8 (IRVKN)
ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
ಮತ್ತಾಯನು 28 : 9 (IRVKN)
ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
ಮತ್ತಾಯನು 28 : 10 (IRVKN)
ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು. [PS]
ಮತ್ತಾಯನು 28 : 11 (IRVKN)
{ಕಾವಲುಗಾರನ ಸುದ್ದಿ} [PS] ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
ಮತ್ತಾಯನು 28 : 12 (IRVKN)
ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
ಮತ್ತಾಯನು 28 : 13 (IRVKN)
“ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
ಮತ್ತಾಯನು 28 : 14 (IRVKN)
ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
ಮತ್ತಾಯನು 28 : 15 (IRVKN)
ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. [PS]
ಮತ್ತಾಯನು 28 : 16 (IRVKN)
{ಯೇಸುವಿನ ಕಡೆಯ ಅಪ್ಪಣೆ} [PS] ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
ಮತ್ತಾಯನು 28 : 17 (IRVKN)
ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
ಮತ್ತಾಯನು 28 : 18 (IRVKN)
ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
ಮತ್ತಾಯನು 28 : 19 (IRVKN)
[‡ ಮಾರ್ಕ 16:15,16; ಲೂಕ 24:47] ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
ಮತ್ತಾಯನು 28 : 20 (IRVKN)
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು [§ ಮತ್ತಾ 18:20; ಯೋಹಾ 14:18,19] ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: