ಮತ್ತಾಯನು 4 : 1 (IRVKN)
ಸೈತಾನನು ಯೇಸುವನ್ನು ಶೋಧಿಸಿದ್ದು
ಮಾರ್ಕ 1:12,13; ಲೂಕ 4:1-13 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
ಮತ್ತಾಯನು 4 : 2 (IRVKN)
ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
ಮತ್ತಾಯನು 4 : 3 (IRVKN)
ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
ಮತ್ತಾಯನು 4 : 4 (IRVKN)
ಯೇಸು, * ಧರ್ಮೋ 8:3 “ ‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
ಮತ್ತಾಯನು 4 : 5 (IRVKN)
ಆಗ ಸೈತಾನನು ಯೇಸುವನ್ನು † ಯೆರುಸಲೇಮ್ ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
ಮತ್ತಾಯನು 4 : 6 (IRVKN)
ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‡ ಕೀರ್ತ 91:11,12 ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
ಮತ್ತಾಯನು 4 : 7 (IRVKN)
ಅದಕ್ಕೆ ಯೇಸು, § ಧರ್ಮೋ 6:16 “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.
ಮತ್ತಾಯನು 4 : 8 (IRVKN)
ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
ಮತ್ತಾಯನು 4 : 9 (IRVKN)
ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.
ಮತ್ತಾಯನು 4 : 10 (IRVKN)
ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’* ಧರ್ಮೋ 6:13; 10:16 ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
ಮತ್ತಾಯನು 4 : 12 (IRVKN)
ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು. ಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದು
ಮಾರ್ಕ 1:14,15; ಲೂಕ 4:14,15 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
ಮತ್ತಾಯನು 4 : 13 (IRVKN)
ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
ಮತ್ತಾಯನು 4 : 14 (IRVKN)
ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು† ಯೆಶಾ 9:1-2 ; ಆ ಮಾತು ಏನೆಂದರೆ,
ಮತ್ತಾಯನು 4 : 15 (IRVKN)
‡ ಯೆಶಾ 9:1,2 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
ಮತ್ತಾಯನು 4 : 16 (IRVKN)
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
ಮತ್ತಾಯನು 4 : 17 (IRVKN)
ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
ಮತ್ತಾಯನು 4 : 18 (IRVKN)
ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು
ಮಾರ್ಕ 1:16-20; ಲೂಕ 5:2-11; ಯೋಹಾ 1:40-42 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
ಮತ್ತಾಯನು 4 : 19 (IRVKN)
ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
ಮತ್ತಾಯನು 4 : 20 (IRVKN)
ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
ಮತ್ತಾಯನು 4 : 21 (IRVKN)
ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
ಮತ್ತಾಯನು 4 : 22 (IRVKN)
ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
ಮತ್ತಾಯನು 4 : 23 (IRVKN)
ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು
ಮಾರ್ಕ 1:39; ಲೂಕ 4:15-44; 6:17-19 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
ಮತ್ತಾಯನು 4 : 24 (IRVKN)
ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
ಮತ್ತಾಯನು 4 : 25 (IRVKN)
ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25