ಮತ್ತಾಯನು 5 : 1 (IRVKN)
ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ
ಲೂಕ 6:20-49; 11:1-4,9-13,33-36; 12:22-24,57-59; 16:17,18 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
ಮತ್ತಾಯನು 5 : 2 (IRVKN)
ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,
ಮತ್ತಾಯನು 5 : 3 (IRVKN)
“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
ಮತ್ತಾಯನು 5 : 4 (IRVKN)
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
ಮತ್ತಾಯನು 5 : 5 (IRVKN)
ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.
ಮತ್ತಾಯನು 5 : 6 (IRVKN)
ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
ಮತ್ತಾಯನು 5 : 7 (IRVKN)
ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.
ಮತ್ತಾಯನು 5 : 8 (IRVKN)
* ಕೀರ್ತ 24:4; ಇಬ್ರಿ. 12:14; 1 ಯೋಹಾ 3:2-3: ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.
ಮತ್ತಾಯನು 5 : 9 (IRVKN)
ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
ಮತ್ತಾಯನು 5 : 10 (IRVKN)
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.
ಮತ್ತಾಯನು 5 : 11 (IRVKN)
“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
ಮತ್ತಾಯನು 5 : 12 (IRVKN)
† ಅ. ಕೃ. 5:41; ರೋಮಾ. 5:3 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
ಮತ್ತಾಯನು 5 : 13 (IRVKN)
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
ಮತ್ತಾಯನು 5 : 14 (IRVKN)
‡ ಫಿಲಿ. 2:15 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.
ಮತ್ತಾಯನು 5 : 15 (IRVKN)
ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
ಮತ್ತಾಯನು 5 : 16 (IRVKN)
ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
ಮತ್ತಾಯನು 5 : 17 (IRVKN)
“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.
ಮತ್ತಾಯನು 5 : 18 (IRVKN)
ನಿಮಗೆ ಸತ್ಯವಾಗಿ ಹೇಳುತ್ತೇನೆ,§ ಮತ್ತಾ 24:35; ಲೂಕ 16:17 ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
ಮತ್ತಾಯನು 5 : 19 (IRVKN)
ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
ಮತ್ತಾಯನು 5 : 20 (IRVKN)
ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
ಮತ್ತಾಯನು 5 : 21 (IRVKN)
* ವಿಮೋ 20:13 “ ‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.
ಮತ್ತಾಯನು 5 : 22 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, † ಮೂಲ: ಬೆಂಕಿಯ ಕುಂಡಕ್ಕೆ ಅಗ್ನಿ ನರಕಕ್ಕೆ ಗುರಿಯಾಗುವನು.
ಮತ್ತಾಯನು 5 : 23 (IRVKN)
ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
ಮತ್ತಾಯನು 5 : 24 (IRVKN)
ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
ಮತ್ತಾಯನು 5 : 25 (IRVKN)
“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
ಮತ್ತಾಯನು 5 : 26 (IRVKN)
ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
ಮತ್ತಾಯನು 5 : 27 (IRVKN)
‡ ವಿಮೋ 20:14 “ ‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.
ಮತ್ತಾಯನು 5 : 28 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
ಮತ್ತಾಯನು 5 : 29 (IRVKN)
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
ಮತ್ತಾಯನು 5 : 30 (IRVKN)
§ ಮತ್ತಾ 18:8; ಮಾರ್ಕ 9:43 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
ಮತ್ತಾಯನು 5 : 31 (IRVKN)
ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
ಮತ್ತಾಯನು 5 : 32 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
ಮತ್ತಾಯನು 5 : 33 (IRVKN)
“ಮತ್ತು, ನೀನು ಸುಳ್ಳಾಣೆಯಿಡಬಾರದು;* ವಿಮೋ 20:7; ಯಾಜ 19:12 ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.
ಮತ್ತಾಯನು 5 : 34 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.
ಮತ್ತಾಯನು 5 : 35 (IRVKN)
ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ;† ಕೀರ್ತ 48:2 ಅದು ಆ ಮಹಾ ರಾಜನ ಪಟ್ಟಣವಾಗಿದೆ.
ಮತ್ತಾಯನು 5 : 36 (IRVKN)
ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
ಮತ್ತಾಯನು 5 : 37 (IRVKN)
ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
ಮತ್ತಾಯನು 5 : 38 (IRVKN)
“ ‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.
ಮತ್ತಾಯನು 5 : 39 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
ಮತ್ತಾಯನು 5 : 40 (IRVKN)
ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.
ಮತ್ತಾಯನು 5 : 41 (IRVKN)
ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.
ಮತ್ತಾಯನು 5 : 42 (IRVKN)
ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.
ಮತ್ತಾಯನು 5 : 43 (IRVKN)
‡ ಯಾಜ 19:17,18 “ ‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.
ಮತ್ತಾಯನು 5 : 44 (IRVKN)
ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;§ ಲೂಕ 3:34; ಅ. ಕೃ. 7:60 ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
ಮತ್ತಾಯನು 5 : 45 (IRVKN)
ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಮತ್ತಾಯನು 5 : 46 (IRVKN)
ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.
ಮತ್ತಾಯನು 5 : 47 (IRVKN)
ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
ಮತ್ತಾಯನು 5 : 48 (IRVKN)
* ಆದಿ 17:1; ಎಫೆ 5:1; ಯಾಕೋಬ. 1:4 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48