ಮತ್ತಾಯನು 7 : 1 (IRVKN)
{ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ} [PS] “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
ಮತ್ತಾಯನು 7 : 2 (IRVKN)
ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. [PE][PS]
ಮತ್ತಾಯನು 7 : 3 (IRVKN)
“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
ಮತ್ತಾಯನು 7 : 4 (IRVKN)
ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
ಮತ್ತಾಯನು 7 : 5 (IRVKN)
ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು. [PE][PS]
ಮತ್ತಾಯನು 7 : 6 (IRVKN)
“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. [PS]
ಮತ್ತಾಯನು 7 : 7 (IRVKN)
{ಫಲದಾಯಕ ಪ್ರಾರ್ಥನೆ} [PS] “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
ಮತ್ತಾಯನು 7 : 8 (IRVKN)
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. [PE][PS]
ಮತ್ತಾಯನು 7 : 9 (IRVKN)
“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
ಮತ್ತಾಯನು 7 : 10 (IRVKN)
ಮೀನು ಕೇಳಿದರೆ ಹಾವನ್ನು ಕೊಡುವನೋ?
ಮತ್ತಾಯನು 7 : 11 (IRVKN)
ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
ಮತ್ತಾಯನು 7 : 12 (IRVKN)
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. [PS]
ಮತ್ತಾಯನು 7 : 13 (IRVKN)
{ವಿನಾಶದ ಬಾಗಿಲು ವಿಶಾಲ} [PS] [* ಲೂಕ 13:24.] “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
ಮತ್ತಾಯನು 7 : 14 (IRVKN)
ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ. [PS]
ಮತ್ತಾಯನು 7 : 15 (IRVKN)
{ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ} [PS] “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
ಮತ್ತಾಯನು 7 : 16 (IRVKN)
[† ಲೂಕ 6:43, 44.] ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
ಮತ್ತಾಯನು 7 : 17 (IRVKN)
ಹಾಗೆಯೇ [‡ ಮತ್ತಾ 12:33-35.] ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
ಮತ್ತಾಯನು 7 : 18 (IRVKN)
ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.
ಮತ್ತಾಯನು 7 : 19 (IRVKN)
ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
ಮತ್ತಾಯನು 7 : 20 (IRVKN)
ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ. [PS]
ಮತ್ತಾಯನು 7 : 21 (IRVKN)
{ಕಪಟಿಗಳಿಗೆ ದೊರೆಯುವ ತೀರ್ಪು} [PS] [§ ಲೂಕ 6:46-49; ಯಾಕೋಬ 1:22. ] “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
ಮತ್ತಾಯನು 7 : 22 (IRVKN)
ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
ಮತ್ತಾಯನು 7 : 23 (IRVKN)
ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು. [PS]
ಮತ್ತಾಯನು 7 : 24 (IRVKN)
{ಸ್ಥಿರವಾದ ಮನೆ} [PS] “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
ಮತ್ತಾಯನು 7 : 25 (IRVKN)
ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
ಮತ್ತಾಯನು 7 : 26 (IRVKN)
ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.
ಮತ್ತಾಯನು 7 : 27 (IRVKN)
ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು. [PE][PS]
ಮತ್ತಾಯನು 7 : 28 (IRVKN)
“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
ಮತ್ತಾಯನು 7 : 29 (IRVKN)
ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: