ಮಿಕ 5 : 1 (IRVKN)
ಇಸ್ರಾಯೇಲನ್ನು ರಕ್ಷಿಸುವ ರಾಜ ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
ಮಿಕ 5 : 2 (IRVKN)
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
ಮಿಕ 5 : 3 (IRVKN)
ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು
ಮಿಕ 5 : 4 (IRVKN)
ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
ಮಿಕ 5 : 5 (IRVKN)
ಬಿಡುಗಡೆ - ವಿನಾಶ ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
ಮಿಕ 5 : 6 (IRVKN)
ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.
ಮಿಕ 5 : 7 (IRVKN)
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮಾನವರ ಪ್ರಯತ್ನವಿಲ್ಲದೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
ಮಿಕ 5 : 8 (IRVKN)
ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.
ಮಿಕ 5 : 9 (IRVKN)
ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.
ಮಿಕ 5 : 10 (IRVKN)
ಭಂಗವಾದ ಇಸ್ರಾಯೇಲಿನ ಮೂಢಭರವಸೆ ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.
ಮಿಕ 5 : 11 (IRVKN)
ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
ಮಿಕ 5 : 12 (IRVKN)
ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.
ಮಿಕ 5 : 13 (IRVKN)
ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.
ಮಿಕ 5 : 14 (IRVKN)
ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.
ಮಿಕ 5 : 15 (IRVKN)
ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”

1 2 3 4 5 6 7 8 9 10 11 12 13 14 15