ಮಿಕ 6 : 1 (IRVKN)
ಯೆಹೋವನಿಗೂ ಆತನ ಜನರಿಗೂ ಇರುವ ವ್ಯಾಜ್ಯ ಪ್ರವಾದಿಯಾದ ಮೀಕನು ಯೆಹೋವನಿಗೆ ಹೇಳುವುದನ್ನು ಕೇಳಿರಿ “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ
ಮಿಕ 6 : 2 (IRVKN)
ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”
ಮಿಕ 6 : 3 (IRVKN)
“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.
ಮಿಕ 6 : 4 (IRVKN)
ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.
ಮಿಕ 6 : 5 (IRVKN)
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ * ಶಿಟ್ಟೀಮ್ ಯೊರ್ದನಿನ ಪೂರ್ವ ದಂಡೆಯಲ್ಲಿ ಹಾಕಲ್ಪಟ್ಟಂಥ ಇಸ್ರಾಯೇಲರ ಕೊನೆಯ ಪಾಳೆಯವಾಗಿತ್ತು (ಯೆಹೋ. 3:1), ಮತ್ತು ಗಿಲ್ಗಾಲ್ ಪಶ್ಚಿಮ ದಂಡೆಯಲ್ಲಿ ವಾಗ್ದತ್ತ ದೇಶದಲ್ಲಿ ಹಾಕಲ್ಪಟ್ಟಂಥ ಅವರ ಮೊದಲ ಪಾಳೆಯವಾಗಿತ್ತು (ಯೆಹೋ. 4:19). ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
ಮಿಕ 6 : 6 (IRVKN)
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
ಮಿಕ 6 : 7 (IRVKN)
ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?
ಮಿಕ 6 : 8 (IRVKN)
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
ಮಿಕ 6 : 9 (IRVKN)
ಯೆರೂಸಲೇಮಿನ ಭ್ರಷ್ಟಾಚಾರ ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.
ಮಿಕ 6 : 10 (IRVKN)
ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?
ಮಿಕ 6 : 11 (IRVKN)
ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?
ಮಿಕ 6 : 12 (IRVKN)
ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.
ಮಿಕ 6 : 13 (IRVKN)
ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.† ಹಾಳುಮಾಡುವೆನು. ಅಥವಾ ಹಾಳಾಗುವಂತೆ ಗಾಯಪಡಿಸುವೆನು.
ಮಿಕ 6 : 14 (IRVKN)
ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.
ಮಿಕ 6 : 15 (IRVKN)
ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
ಮಿಕ 6 : 16 (IRVKN)
ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”
❮
❯
1
2
3
4
5
6
7
8
9
10
11
12
13
14
15
16