ಅರಣ್ಯಕಾಂಡ 1 : 1 (IRVKN)
{ಮೊದಲನೆಯ ಜನಗಣತಿ} [PS] ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,
ಅರಣ್ಯಕಾಂಡ 1 : 2 (IRVKN)
“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
ಅರಣ್ಯಕಾಂಡ 1 : 3 (IRVKN)
ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಸೈನ್ಯಸೈನ್ಯವಾಗಿ ನೀನೂ ಮತ್ತು ಆರೋನನೂ ಲೆಕ್ಕಹಾಕಬೇಕು.
ಅರಣ್ಯಕಾಂಡ 1 : 4 (IRVKN)
ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.
ಅರಣ್ಯಕಾಂಡ 1 : 5 (IRVKN)
ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: [QBR] ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್, [QBR]
ಅರಣ್ಯಕಾಂಡ 1 : 6 (IRVKN)
ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್, [QBR]
ಅರಣ್ಯಕಾಂಡ 1 : 7 (IRVKN)
ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್, [QBR]
ಅರಣ್ಯಕಾಂಡ 1 : 8 (IRVKN)
ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್, [QBR]
ಅರಣ್ಯಕಾಂಡ 1 : 9 (IRVKN)
ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್, [QBR]
ಅರಣ್ಯಕಾಂಡ 1 : 10 (IRVKN)
ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, [QBR] ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್, [QBR]
ಅರಣ್ಯಕಾಂಡ 1 : 11 (IRVKN)
ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್, [QBR]
ಅರಣ್ಯಕಾಂಡ 1 : 12 (IRVKN)
ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್, [QBR]
ಅರಣ್ಯಕಾಂಡ 1 : 13 (IRVKN)
ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್, [QBR]
ಅರಣ್ಯಕಾಂಡ 1 : 14 (IRVKN)
ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್, [QBR]
ಅರಣ್ಯಕಾಂಡ 1 : 15 (IRVKN)
ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.” [PE][PS]
ಅರಣ್ಯಕಾಂಡ 1 : 16 (IRVKN)
ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ [* ಸಹಸ್ರಾಧಿಪತಿಗಳು.] ಪ್ರಮುಖರು. [PE][PS]
ಅರಣ್ಯಕಾಂಡ 1 : 17 (IRVKN)
ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.
ಅರಣ್ಯಕಾಂಡ 1 : 18 (IRVKN)
ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
ಅರಣ್ಯಕಾಂಡ 1 : 19 (IRVKN)
ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು. [PE][PS]
ಅರಣ್ಯಕಾಂಡ 1 : 20 (IRVKN)
ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
ಅರಣ್ಯಕಾಂಡ 1 : 21 (IRVKN)
ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ. [PE][PS]
ಅರಣ್ಯಕಾಂಡ 1 : 22 (IRVKN)
ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 23 (IRVKN)
ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ. [PE][PS]
ಅರಣ್ಯಕಾಂಡ 1 : 24 (IRVKN)
ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
ಅರಣ್ಯಕಾಂಡ 1 : 25 (IRVKN)
ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ. [PE][PS]
ಅರಣ್ಯಕಾಂಡ 1 : 26 (IRVKN)
ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 27 (IRVKN)
ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ. [PE][PS]
ಅರಣ್ಯಕಾಂಡ 1 : 28 (IRVKN)
ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 29 (IRVKN)
ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ. [PE][PS]
ಅರಣ್ಯಕಾಂಡ 1 : 30 (IRVKN)
ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 31 (IRVKN)
ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ. [PE][PS]
ಅರಣ್ಯಕಾಂಡ 1 : 32 (IRVKN)
ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 33 (IRVKN)
ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ. [PE][PS]
ಅರಣ್ಯಕಾಂಡ 1 : 34 (IRVKN)
ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 35 (IRVKN)
ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ. [PE][PS]
ಅರಣ್ಯಕಾಂಡ 1 : 36 (IRVKN)
ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 37 (IRVKN)
ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. [PE][PS]
ಅರಣ್ಯಕಾಂಡ 1 : 38 (IRVKN)
ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 39 (IRVKN)
ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ. [PE][PS]
ಅರಣ್ಯಕಾಂಡ 1 : 40 (IRVKN)
ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 41 (IRVKN)
ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ. [PE][PS]
ಅರಣ್ಯಕಾಂಡ 1 : 42 (IRVKN)
ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಅರಣ್ಯಕಾಂಡ 1 : 43 (IRVKN)
ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. [PE][PS]
ಅರಣ್ಯಕಾಂಡ 1 : 44 (IRVKN)
ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
ಅರಣ್ಯಕಾಂಡ 1 : 45 (IRVKN)
ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
ಅರಣ್ಯಕಾಂಡ 1 : 46 (IRVKN)
ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ. [PE][PS]
ಅರಣ್ಯಕಾಂಡ 1 : 47 (IRVKN)
ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
ಅರಣ್ಯಕಾಂಡ 1 : 48 (IRVKN)
ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 1 : 49 (IRVKN)
“ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
ಅರಣ್ಯಕಾಂಡ 1 : 50 (IRVKN)
ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
ಅರಣ್ಯಕಾಂಡ 1 : 51 (IRVKN)
ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
ಅರಣ್ಯಕಾಂಡ 1 : 52 (IRVKN)
ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
ಅರಣ್ಯಕಾಂಡ 1 : 53 (IRVKN)
ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
ಅರಣ್ಯಕಾಂಡ 1 : 54 (IRVKN)
ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54

BG:

Opacity:

Color:


Size:


Font: