ಅರಣ್ಯಕಾಂಡ 10 : 1 (IRVKN)
ದೇವಸ್ಥಾನದ ಬೆಳ್ಳಿಯ ತುತ್ತೂರಿಗಳು ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 10 : 2 (IRVKN)
“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
ಅರಣ್ಯಕಾಂಡ 10 : 3 (IRVKN)
ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
ಅರಣ್ಯಕಾಂಡ 10 : 4 (IRVKN)
ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
ಅರಣ್ಯಕಾಂಡ 10 : 5 (IRVKN)
ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
ಅರಣ್ಯಕಾಂಡ 10 : 6 (IRVKN)
ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
ಅರಣ್ಯಕಾಂಡ 10 : 7 (IRVKN)
ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
ಅರಣ್ಯಕಾಂಡ 10 : 8 (IRVKN)
“ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
ಅರಣ್ಯಕಾಂಡ 10 : 9 (IRVKN)
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
ಅರಣ್ಯಕಾಂಡ 10 : 10 (IRVKN)
ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
ಅರಣ್ಯಕಾಂಡ 10 : 11 (IRVKN)
ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
ಅರಣ್ಯಕಾಂಡ 10 : 12 (IRVKN)
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
ಅರಣ್ಯಕಾಂಡ 10 : 13 (IRVKN)
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
ಅರಣ್ಯಕಾಂಡ 10 : 14 (IRVKN)
ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
ಅರಣ್ಯಕಾಂಡ 10 : 15 (IRVKN)
ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
ಅರಣ್ಯಕಾಂಡ 10 : 16 (IRVKN)
ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
ಅರಣ್ಯಕಾಂಡ 10 : 17 (IRVKN)
ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
ಅರಣ್ಯಕಾಂಡ 10 : 18 (IRVKN)
ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
ಅರಣ್ಯಕಾಂಡ 10 : 19 (IRVKN)
ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
ಅರಣ್ಯಕಾಂಡ 10 : 20 (IRVKN)
ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
ಅರಣ್ಯಕಾಂಡ 10 : 21 (IRVKN)
ಅರಣ್ಯಕಾಂಡ 10 : 22 (IRVKN)
ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
ಅರಣ್ಯಕಾಂಡ 10 : 23 (IRVKN)
ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
ಅರಣ್ಯಕಾಂಡ 10 : 24 (IRVKN)
ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
ಅರಣ್ಯಕಾಂಡ 10 : 25 (IRVKN)
ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
ಅರಣ್ಯಕಾಂಡ 10 : 26 (IRVKN)
ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
ಅರಣ್ಯಕಾಂಡ 10 : 27 (IRVKN)
ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
ಅರಣ್ಯಕಾಂಡ 10 : 28 (IRVKN)
ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
ಅರಣ್ಯಕಾಂಡ 10 : 29 (IRVKN)
ಯೆಹೋವನ ಮಂಜೂಷವು ಮುಂದಾಗಿ ಹೋದದ್ದು
ಅರಣ್ಯಕಾಂಡ 10 : 30 (IRVKN)
ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
ಅರಣ್ಯಕಾಂಡ 10 : 31 (IRVKN)
ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು. ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
ಅರಣ್ಯಕಾಂಡ 10 : 32 (IRVKN)
ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
ಅರಣ್ಯಕಾಂಡ 10 : 33 (IRVKN)
ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
ಅರಣ್ಯಕಾಂಡ 10 : 34 (IRVKN)
ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
ಅರಣ್ಯಕಾಂಡ 10 : 35 (IRVKN)
ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
ಅರಣ್ಯಕಾಂಡ 10 : 36 (IRVKN)
ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36