ಅರಣ್ಯಕಾಂಡ 12 : 1 (IRVKN)
ಮಿರ್ಯಾಮಳಿಗೆ ಉಂಟಾದ ತೊನ್ನು ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
ಅರಣ್ಯಕಾಂಡ 12 : 2 (IRVKN)
ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
ಅರಣ್ಯಕಾಂಡ 12 : 3 (IRVKN)
ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
ಅರಣ್ಯಕಾಂಡ 12 : 4 (IRVKN)
ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.
ಅರಣ್ಯಕಾಂಡ 12 : 5 (IRVKN)
ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.
ಅರಣ್ಯಕಾಂಡ 12 : 6 (IRVKN)
ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
ಅರಣ್ಯಕಾಂಡ 12 : 7 (IRVKN)
ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
ಅರಣ್ಯಕಾಂಡ 12 : 8 (IRVKN)
ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
ಅರಣ್ಯಕಾಂಡ 12 : 9 (IRVKN)
ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.
ಅರಣ್ಯಕಾಂಡ 12 : 10 (IRVKN)
ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
ಅರಣ್ಯಕಾಂಡ 12 : 11 (IRVKN)
ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
ಅರಣ್ಯಕಾಂಡ 12 : 12 (IRVKN)
ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು.
ಅರಣ್ಯಕಾಂಡ 12 : 13 (IRVKN)
ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.
ಅರಣ್ಯಕಾಂಡ 12 : 14 (IRVKN)
ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.
ಅರಣ್ಯಕಾಂಡ 12 : 15 (IRVKN)
ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.
ಅರಣ್ಯಕಾಂಡ 12 : 16 (IRVKN)
ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.
❮
❯
1
2
3
4
5
6
7
8
9
10
11
12
13
14
15
16