ಅರಣ್ಯಕಾಂಡ 13 : 1 (IRVKN)
ಗೂಢಚಾರರನ್ನು ಕಾನಾನ್ ದೇಶಕ್ಕೆ ಕಳುಹಿಸಿದ್ದು ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 13 : 2 (IRVKN)
“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 13 : 3 (IRVKN)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
ಅರಣ್ಯಕಾಂಡ 13 : 4 (IRVKN)
ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
ಅರಣ್ಯಕಾಂಡ 13 : 5 (IRVKN)
ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಟ್,
ಅರಣ್ಯಕಾಂಡ 13 : 6 (IRVKN)
ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,
ಅರಣ್ಯಕಾಂಡ 13 : 7 (IRVKN)
ಇಸ್ಸಾಕಾರ್ ಕುಲದ ಯೋಸೇಫನ ಮಗನಾದ ಇಗಾಲ್,
ಅರಣ್ಯಕಾಂಡ 13 : 8 (IRVKN)
ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,
ಅರಣ್ಯಕಾಂಡ 13 : 9 (IRVKN)
ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ,
ಅರಣ್ಯಕಾಂಡ 13 : 10 (IRVKN)
ಜೆಬುಲೂನ್ ಕುಲದ ಸೋದೀಯನ ಮಗನಾದ ಗದ್ದೀಯೇಲ್,
ಅರಣ್ಯಕಾಂಡ 13 : 11 (IRVKN)
ಯೋಸೇಫ್ ಅಂದರೆ ಮನಸ್ಸೆ ಕುಲದ ಸೂಸೀಯನ ಮಗನಾದ ಗದ್ದೀ,
ಅರಣ್ಯಕಾಂಡ 13 : 12 (IRVKN)
ದಾನ್ ಕುಲದ ಗೆಮಲ್ಲೀಯನ ಮಗನಾದ ಅಮ್ಮೀಯೇಲ್,
ಅರಣ್ಯಕಾಂಡ 13 : 13 (IRVKN)
ಆಶೇರ್ ಕುಲದ ಮೀಕಾಯೇಲನ ಮಗನಾದ ಸೆತೂರ್,
ಅರಣ್ಯಕಾಂಡ 13 : 14 (IRVKN)
ನಫ್ತಾಲಿ ಕುಲದ ವಾಪೆಸೀಯನ ಮಗನಾದ ನಹಬೀ,
ಅರಣ್ಯಕಾಂಡ 13 : 15 (IRVKN)
ಗಾದ್ ಕುಲದ ಮಾಕೀಯನ ಮಗನಾದ ಗೆಯೂವೇಲ್.
ಅರಣ್ಯಕಾಂಡ 13 : 16 (IRVKN)
ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
ಅರಣ್ಯಕಾಂಡ 13 : 17 (IRVKN)
ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.
ಅರಣ್ಯಕಾಂಡ 13 : 18 (IRVKN)
ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,
ಅರಣ್ಯಕಾಂಡ 13 : 19 (IRVKN)
ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?
ಅರಣ್ಯಕಾಂಡ 13 : 20 (IRVKN)
ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.
ಅರಣ್ಯಕಾಂಡ 13 : 21 (IRVKN)
ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
ಅರಣ್ಯಕಾಂಡ 13 : 22 (IRVKN)
ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.
ಅರಣ್ಯಕಾಂಡ 13 : 23 (IRVKN)
ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.
ಅರಣ್ಯಕಾಂಡ 13 : 24 (IRVKN)
ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “* ದ್ರಾಕ್ಷಿಯ ಗೊಂಚಲು. ಎಷ್ಕೋಲ್” ಎಂದು ಹೆಸರು ಉಂಟಾಯಿತು.
ಅರಣ್ಯಕಾಂಡ 13 : 25 (IRVKN)
ಗೂಢಚಾರರು ಸಲ್ಲಿಸಿದ ವರದಿ ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು.
ಅರಣ್ಯಕಾಂಡ 13 : 26 (IRVKN)
ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.
ಅರಣ್ಯಕಾಂಡ 13 : 27 (IRVKN)
ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.
ಅರಣ್ಯಕಾಂಡ 13 : 28 (IRVKN)
ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.
ಅರಣ್ಯಕಾಂಡ 13 : 29 (IRVKN)
ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.
ಅರಣ್ಯಕಾಂಡ 13 : 30 (IRVKN)
ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.
ಅರಣ್ಯಕಾಂಡ 13 : 31 (IRVKN)
ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.
ಅರಣ್ಯಕಾಂಡ 13 : 32 (IRVKN)
ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
ಅರಣ್ಯಕಾಂಡ 13 : 33 (IRVKN)
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ನೆಫೀಲಿಯ ರಾಕ್ಷಸಾಕಾರದವರು. ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33