ಅರಣ್ಯಕಾಂಡ 15 : 1 (IRVKN)
{ಯಜ್ಞಪಶುಗಳೊಡನೆ ಸಮರ್ಪಿಸಬೇಕಾದ ನೈವೇದ್ಯದ್ರವ್ಯಗಳ ವಿವರಣೆ} [PS] ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 15 : 2 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
ಅರಣ್ಯಕಾಂಡ 15 : 3 (IRVKN)
ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
ಅರಣ್ಯಕಾಂಡ 15 : 4 (IRVKN)
ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
ಅರಣ್ಯಕಾಂಡ 15 : 5 (IRVKN)
ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು. [PE][PS]
ಅರಣ್ಯಕಾಂಡ 15 : 6 (IRVKN)
“ ‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
ಅರಣ್ಯಕಾಂಡ 15 : 7 (IRVKN)
ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. [PE][PS]
ಅರಣ್ಯಕಾಂಡ 15 : 8 (IRVKN)
“ ‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
ಅರಣ್ಯಕಾಂಡ 15 : 9 (IRVKN)
ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
ಅರಣ್ಯಕಾಂಡ 15 : 10 (IRVKN)
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು. [PE][PS]
ಅರಣ್ಯಕಾಂಡ 15 : 11 (IRVKN)
“ ‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
ಅರಣ್ಯಕಾಂಡ 15 : 12 (IRVKN)
ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
ಅರಣ್ಯಕಾಂಡ 15 : 13 (IRVKN)
ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
ಅರಣ್ಯಕಾಂಡ 15 : 14 (IRVKN)
ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
ಅರಣ್ಯಕಾಂಡ 15 : 15 (IRVKN)
ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
ಅರಣ್ಯಕಾಂಡ 15 : 16 (IRVKN)
ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’ ” [PS]
ಅರಣ್ಯಕಾಂಡ 15 : 17 (IRVKN)
{ಯಾಜಕರಿಗೆ ಪ್ರತ್ಯೇಕಿಸಬೇಕಾದ ರೊಟ್ಟಿಯ ನಿಯಮ} [PS] ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 15 : 18 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
ಅರಣ್ಯಕಾಂಡ 15 : 19 (IRVKN)
ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
ಅರಣ್ಯಕಾಂಡ 15 : 20 (IRVKN)
ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. [PS]
ಅರಣ್ಯಕಾಂಡ 15 : 21 (IRVKN)
{ತಿಳಿಯದೆ ಮಾಡಿದ ತಪ್ಪಿಗಾಗಿ ದೋಷಪರಿಹಾರವನ್ನು ಮಾಡುವ ವಿಧಾನ} [PS] “ ‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
ಅರಣ್ಯಕಾಂಡ 15 : 22 (IRVKN)
ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
ಅರಣ್ಯಕಾಂಡ 15 : 23 (IRVKN)
ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
ಅರಣ್ಯಕಾಂಡ 15 : 24 (IRVKN)
ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
ಅರಣ್ಯಕಾಂಡ 15 : 25 (IRVKN)
ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
ಅರಣ್ಯಕಾಂಡ 15 : 26 (IRVKN)
ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. [PE][PS]
ಅರಣ್ಯಕಾಂಡ 15 : 27 (IRVKN)
“ ‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
ಅರಣ್ಯಕಾಂಡ 15 : 28 (IRVKN)
ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಅರಣ್ಯಕಾಂಡ 15 : 29 (IRVKN)
ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
ಅರಣ್ಯಕಾಂಡ 15 : 30 (IRVKN)
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಅರಣ್ಯಕಾಂಡ 15 : 31 (IRVKN)
ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’ ” [PS]
ಅರಣ್ಯಕಾಂಡ 15 : 32 (IRVKN)
{ಸಬ್ಬತ್ ದಿನದಲ್ಲಿ ಕೆಲಸಮಾಡಿದವನಿಗೆ ಮರಣಶಿಕ್ಷೆ ವಿಧಿಸಲ್ಪಟ್ಟಿದ್ದು} [PS] ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
ಅರಣ್ಯಕಾಂಡ 15 : 33 (IRVKN)
ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
ಅರಣ್ಯಕಾಂಡ 15 : 34 (IRVKN)
ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
ಅರಣ್ಯಕಾಂಡ 15 : 35 (IRVKN)
ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 15 : 36 (IRVKN)
ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು. [PS]
ಅರಣ್ಯಕಾಂಡ 15 : 37 (IRVKN)
{ಇಸ್ರಾಯೇಲರು ಬಟ್ಟೆಯ ಮೂಲೆಗಳಿಗೆ ಗೊಂಡೆ ಕಟ್ಟಿಕೊಳ್ಳಬೇಕೆಂಬುದು} [PS] ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 15 : 38 (IRVKN)
“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
ಅರಣ್ಯಕಾಂಡ 15 : 39 (IRVKN)
ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
ಅರಣ್ಯಕಾಂಡ 15 : 40 (IRVKN)
ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
ಅರಣ್ಯಕಾಂಡ 15 : 41 (IRVKN)
ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41

BG:

Opacity:

Color:


Size:


Font: