ಅರಣ್ಯಕಾಂಡ 16 : 1 (IRVKN)
ಕೋರಹನ, ದಾತಾನ್, ಅಬೀರಾಮರ, ವಿರೋಧ ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಕರೆದುಕೊಂಡು, ಕೆಲವು ಜನರನ್ನು ಕೂಡಿಸಿದರು.
ಅರಣ್ಯಕಾಂಡ 16 : 2 (IRVKN)
ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
ಅರಣ್ಯಕಾಂಡ 16 : 3 (IRVKN)
ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
ಅರಣ್ಯಕಾಂಡ 16 : 4 (IRVKN)
ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
ಅರಣ್ಯಕಾಂಡ 16 : 5 (IRVKN)
ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
ಅರಣ್ಯಕಾಂಡ 16 : 6 (IRVKN)
ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
ಅರಣ್ಯಕಾಂಡ 16 : 7 (IRVKN)
ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
ಅರಣ್ಯಕಾಂಡ 16 : 8 (IRVKN)
ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
ಅರಣ್ಯಕಾಂಡ 16 : 9 (IRVKN)
ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
ಅರಣ್ಯಕಾಂಡ 16 : 10 (IRVKN)
ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
ಅರಣ್ಯಕಾಂಡ 16 : 11 (IRVKN)
ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
ಅರಣ್ಯಕಾಂಡ 16 : 12 (IRVKN)
ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
ಅರಣ್ಯಕಾಂಡ 16 : 13 (IRVKN)
ನೀನು * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
ಅರಣ್ಯಕಾಂಡ 16 : 14 (IRVKN)
ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಮೂಲ ಭಾಷೆಯಲ್ಲಿ ಈ ಜನರ ಕಣ್ಣುಗಳನ್ನು ಕಿತ್ತುಹಾಕಬೇಕೆಂದಿದ್ದಿಯೋ? ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
ಅರಣ್ಯಕಾಂಡ 16 : 15 (IRVKN)
ಅರಣ್ಯಕಾಂಡ 16 : 16 (IRVKN)
ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು. ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
ಅರಣ್ಯಕಾಂಡ 16 : 17 (IRVKN)
ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
ಅರಣ್ಯಕಾಂಡ 16 : 18 (IRVKN)
ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
ಅರಣ್ಯಕಾಂಡ 16 : 19 (IRVKN)
ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
ಅರಣ್ಯಕಾಂಡ 16 : 20 (IRVKN)
ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 16 : 21 (IRVKN)
“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 16 : 22 (IRVKN)
ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
ಅರಣ್ಯಕಾಂಡ 16 : 23 (IRVKN)
ಆಗ ಯೆಹೋವನು ಮೋಶೆಗೆ ಉತ್ತರವಾಗಿ,
ಅರಣ್ಯಕಾಂಡ 16 : 24 (IRVKN)
“ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
ಅರಣ್ಯಕಾಂಡ 16 : 25 (IRVKN)
ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
ಅರಣ್ಯಕಾಂಡ 16 : 26 (IRVKN)
ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
ಅರಣ್ಯಕಾಂಡ 16 : 27 (IRVKN)
ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
ಅರಣ್ಯಕಾಂಡ 16 : 28 (IRVKN)
ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
ಅರಣ್ಯಕಾಂಡ 16 : 29 (IRVKN)
ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
ಅರಣ್ಯಕಾಂಡ 16 : 30 (IRVKN)
ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.
ಅರಣ್ಯಕಾಂಡ 16 : 31 (IRVKN)
ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
ಅರಣ್ಯಕಾಂಡ 16 : 32 (IRVKN)
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
ಅರಣ್ಯಕಾಂಡ 16 : 33 (IRVKN)
ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.
ಅರಣ್ಯಕಾಂಡ 16 : 34 (IRVKN)
ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
ಅರಣ್ಯಕಾಂಡ 16 : 35 (IRVKN)
ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
ಅರಣ್ಯಕಾಂಡ 16 : 36 (IRVKN)
ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ
ಅರಣ್ಯಕಾಂಡ 16 : 37 (IRVKN)
“ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
ಅರಣ್ಯಕಾಂಡ 16 : 38 (IRVKN)
ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
ಅರಣ್ಯಕಾಂಡ 16 : 39 (IRVKN)
ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
ಅರಣ್ಯಕಾಂಡ 16 : 40 (IRVKN)
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
ಅರಣ್ಯಕಾಂಡ 16 : 41 (IRVKN)
ಜನರು ಗುಣುಗುಟ್ಟಿ ಘೋರವ್ಯಾಧಿಯಿಂದ ಸತ್ತದ್ದು ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
ಅರಣ್ಯಕಾಂಡ 16 : 42 (IRVKN)
ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
ಅರಣ್ಯಕಾಂಡ 16 : 43 (IRVKN)
ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
ಅರಣ್ಯಕಾಂಡ 16 : 44 (IRVKN)
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 16 : 45 (IRVKN)
“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
ಅರಣ್ಯಕಾಂಡ 16 : 46 (IRVKN)
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
ಅರಣ್ಯಕಾಂಡ 16 : 47 (IRVKN)
ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
ಅರಣ್ಯಕಾಂಡ 16 : 48 (IRVKN)
ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
ಅರಣ್ಯಕಾಂಡ 16 : 49 (IRVKN)
ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
ಅರಣ್ಯಕಾಂಡ 16 : 50 (IRVKN)
ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50