ಅರಣ್ಯಕಾಂಡ 17 : 1 (IRVKN)
ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
ಅರಣ್ಯಕಾಂಡ 17 : 2 (IRVKN)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕಾಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
ಅರಣ್ಯಕಾಂಡ 17 : 3 (IRVKN)
ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
ಅರಣ್ಯಕಾಂಡ 17 : 4 (IRVKN)
ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ [* ಮಂಜೂಷದ ಪೆಟ್ಟಿಗೆ, ವಿಮೋ 25:22; 32: 15 ]ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
ಅರಣ್ಯಕಾಂಡ 17 : 5 (IRVKN)
ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’ ” ಎಂದನು.
ಅರಣ್ಯಕಾಂಡ 17 : 6 (IRVKN)
ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
ಅರಣ್ಯಕಾಂಡ 17 : 7 (IRVKN)
ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
ಅರಣ್ಯಕಾಂಡ 17 : 8 (IRVKN)
ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
ಅರಣ್ಯಕಾಂಡ 17 : 9 (IRVKN)
ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
ಅರಣ್ಯಕಾಂಡ 17 : 10 (IRVKN)
ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 17 : 11 (IRVKN)
ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
ಅರಣ್ಯಕಾಂಡ 17 : 12 (IRVKN)
ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
ಅರಣ್ಯಕಾಂಡ 17 : 13 (IRVKN)
ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.

1 2 3 4 5 6 7 8 9 10 11 12 13