ಅರಣ್ಯಕಾಂಡ 18 : 1 (IRVKN)
{ಯಾಜಕರ ಮತ್ತು ಲೇವಿಯರ ಕರ್ತವ್ಯ} [PS] ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
ಅರಣ್ಯಕಾಂಡ 18 : 2 (IRVKN)
ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
ಅರಣ್ಯಕಾಂಡ 18 : 3 (IRVKN)
ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
ಅರಣ್ಯಕಾಂಡ 18 : 4 (IRVKN)
ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
ಅರಣ್ಯಕಾಂಡ 18 : 5 (IRVKN)
ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
ಅರಣ್ಯಕಾಂಡ 18 : 6 (IRVKN)
ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
ಅರಣ್ಯಕಾಂಡ 18 : 7 (IRVKN)
ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು. [PS]
ಅರಣ್ಯಕಾಂಡ 18 : 8 (IRVKN)
{ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು} [PS] ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.
ಅರಣ್ಯಕಾಂಡ 18 : 9 (IRVKN)
ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
ಅರಣ್ಯಕಾಂಡ 18 : 10 (IRVKN)
ನೀವು [* ಅಥವಾ ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.] ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. [PE][PS]
ಅರಣ್ಯಕಾಂಡ 18 : 11 (IRVKN)
“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
ಅರಣ್ಯಕಾಂಡ 18 : 12 (IRVKN)
ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
ಅರಣ್ಯಕಾಂಡ 18 : 13 (IRVKN)
ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
ಅರಣ್ಯಕಾಂಡ 18 : 14 (IRVKN)
ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
ಅರಣ್ಯಕಾಂಡ 18 : 15 (IRVKN)
ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
ಅರಣ್ಯಕಾಂಡ 18 : 16 (IRVKN)
ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ [† 55 ಗ್ರಾಂ ಬೆಳ್ಳಿ.] ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. [PE][PS]
ಅರಣ್ಯಕಾಂಡ 18 : 17 (IRVKN)
“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
ಅರಣ್ಯಕಾಂಡ 18 : 18 (IRVKN)
ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
ಅರಣ್ಯಕಾಂಡ 18 : 19 (IRVKN)
ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
ಅರಣ್ಯಕಾಂಡ 18 : 20 (IRVKN)
ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. [PS]
ಅರಣ್ಯಕಾಂಡ 18 : 21 (IRVKN)
{ಲೇವಿಯರ ಪಾಲು} [PS] “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
ಅರಣ್ಯಕಾಂಡ 18 : 22 (IRVKN)
ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
ಅರಣ್ಯಕಾಂಡ 18 : 23 (IRVKN)
ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.
ಅರಣ್ಯಕಾಂಡ 18 : 24 (IRVKN)
ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’ ” ಎಂದು ಹೇಳಿದ ಮಾತಿಗೆ ಇದೇ ಕಾರಣ. [PE][PS]
ಅರಣ್ಯಕಾಂಡ 18 : 25 (IRVKN)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
ಅರಣ್ಯಕಾಂಡ 18 : 26 (IRVKN)
“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
ಅರಣ್ಯಕಾಂಡ 18 : 27 (IRVKN)
ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
ಅರಣ್ಯಕಾಂಡ 18 : 28 (IRVKN)
ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
ಅರಣ್ಯಕಾಂಡ 18 : 29 (IRVKN)
ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
ಅರಣ್ಯಕಾಂಡ 18 : 30 (IRVKN)
ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
ಅರಣ್ಯಕಾಂಡ 18 : 31 (IRVKN)
ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.
ಅರಣ್ಯಕಾಂಡ 18 : 32 (IRVKN)
ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’ ” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: