ಅರಣ್ಯಕಾಂಡ 2 : 1 (IRVKN)
{ಇಸ್ರಾಯೇಲರು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ} [PS] ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,
ಅರಣ್ಯಕಾಂಡ 2 : 2 (IRVKN)
“ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.” [PE][PS]
ಅರಣ್ಯಕಾಂಡ 2 : 3 (IRVKN)
ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
ಅರಣ್ಯಕಾಂಡ 2 : 4 (IRVKN)
ಅವನ ಸೈನಿಕರ ಸಂಖ್ಯೆ 74,600 ಮಂದಿ. [PE][PS]
ಅರಣ್ಯಕಾಂಡ 2 : 5 (IRVKN)
ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.
ಅರಣ್ಯಕಾಂಡ 2 : 6 (IRVKN)
ಅವನ ಸೈನಿಕರ ಸಂಖ್ಯೆ 54,400 ಮಂದಿ. [PE][PS]
ಅರಣ್ಯಕಾಂಡ 2 : 7 (IRVKN)
ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.
ಅರಣ್ಯಕಾಂಡ 2 : 8 (IRVKN)
ಅವನ ಸೈನಿಕರ ಸಂಖ್ಯೆ 57,400 ಮಂದಿ. [PE][PS]
ಅರಣ್ಯಕಾಂಡ 2 : 9 (IRVKN)
ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. [PE][PS]
ಅರಣ್ಯಕಾಂಡ 2 : 10 (IRVKN)
ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 11 (IRVKN)
ಅವನ ಸೈನಿಕರ ಸಂಖ್ಯೆ 46,500 ಮಂದಿ. [PE][PS]
ಅರಣ್ಯಕಾಂಡ 2 : 12 (IRVKN)
ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 13 (IRVKN)
ಅವನ ಸೈನಿಕರ ಸಂಖ್ಯೆ 59,300 ಮಂದಿ. [PE][PS]
ಅರಣ್ಯಕಾಂಡ 2 : 14 (IRVKN)
ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 15 (IRVKN)
ಅವನ ಸೈನಿಕರ ಸಂಖ್ಯೆ 45,650 ಮಂದಿ. [PE][PS]
ಅರಣ್ಯಕಾಂಡ 2 : 16 (IRVKN)
ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. [PE][PS]
ಅರಣ್ಯಕಾಂಡ 2 : 17 (IRVKN)
ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. [PE][PS]
ಅರಣ್ಯಕಾಂಡ 2 : 18 (IRVKN)
ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 19 (IRVKN)
ಅವನ ಸೈನಿಕರ ಸಂಖ್ಯೆ 40,500 ಮಂದಿ. [PE][PS]
ಅರಣ್ಯಕಾಂಡ 2 : 20 (IRVKN)
ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 21 (IRVKN)
ಅವನ ಸೈನಿಕರ ಸಂಖ್ಯೆ 32,200 ಮಂದಿ. [PE][PS]
ಅರಣ್ಯಕಾಂಡ 2 : 22 (IRVKN)
ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 23 (IRVKN)
ಅವನ ಸೈನಿಕರ ಸಂಖ್ಯೆ 35,400 ಮಂದಿ. [PE][PS]
ಅರಣ್ಯಕಾಂಡ 2 : 24 (IRVKN)
ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. [PE][PS]
ಅರಣ್ಯಕಾಂಡ 2 : 25 (IRVKN)
ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 26 (IRVKN)
ಅವನ ಸೈನಿಕರ ಸಂಖ್ಯೆ 62,700 ಮಂದಿ. [PE][PS]
ಅರಣ್ಯಕಾಂಡ 2 : 27 (IRVKN)
ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.
ಅರಣ್ಯಕಾಂಡ 2 : 28 (IRVKN)
ಅವನ ಸೈನಿಕರ ಸಂಖ್ಯೆ 41,500 ಮಂದಿ. [PE][PS]
ಅರಣ್ಯಕಾಂಡ 2 : 29 (IRVKN)
ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.
ಅರಣ್ಯಕಾಂಡ 2 : 30 (IRVKN)
ಅವನ ಸೈನಿಕರ ಸಂಖ್ಯೆ 53,400 ಮಂದಿ. [PE][PS]
ಅರಣ್ಯಕಾಂಡ 2 : 31 (IRVKN)
ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು. [PE][PS]
ಅರಣ್ಯಕಾಂಡ 2 : 32 (IRVKN)
ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
ಅರಣ್ಯಕಾಂಡ 2 : 33 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ. [PE][PS]
ಅರಣ್ಯಕಾಂಡ 2 : 34 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: