ಅರಣ್ಯಕಾಂಡ 21 : 1 (IRVKN)
ಇಸ್ರಾಯೇಲರು ಅರಾದಿನ ಅರಸನನ್ನು ಜಯಿಸಿದ್ದು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
ಅರಣ್ಯಕಾಂಡ 21 : 2 (IRVKN)
ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
ಅರಣ್ಯಕಾಂಡ 21 : 3 (IRVKN)
ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ * ಹೊರ್ಮಾ ಅಂದರೆ ನಾಶ. ಹೊರ್ಮಾ ಎಂದು ಹೆಸರಾಯಿತು.
ಅರಣ್ಯಕಾಂಡ 21 : 4 (IRVKN)
ಮೋಶೆ ತಾಮ್ರದ ಸರ್ಪವನ್ನು ಮಾಡಿಸಿದ್ದು ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
ಅರಣ್ಯಕಾಂಡ 21 : 5 (IRVKN)
ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
ಅರಣ್ಯಕಾಂಡ 21 : 6 (IRVKN)
ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
ಅರಣ್ಯಕಾಂಡ 21 : 7 (IRVKN)
ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
ಅರಣ್ಯಕಾಂಡ 21 : 8 (IRVKN)
ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 21 : 9 (IRVKN)
ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ಅರಣ್ಯಕಾಂಡ 21 : 10 (IRVKN)
ಮೋವಾಬ್ ಕಡೆಗೆ ಪ್ರಯಾಣ ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 21 : 11 (IRVKN)
ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 21 : 12 (IRVKN)
ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 21 : 13 (IRVKN)
ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
ಅರಣ್ಯಕಾಂಡ 21 : 14 (IRVKN)
ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
ಅರಣ್ಯಕಾಂಡ 21 : 15 (IRVKN)
ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
ಅರಣ್ಯಕಾಂಡ 21 : 16 (IRVKN)
ಅರಣ್ಯಕಾಂಡ 21 : 17 (IRVKN)
ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು. ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
ಅರಣ್ಯಕಾಂಡ 21 : 18 (IRVKN)
ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
ಅರಣ್ಯಕಾಂಡ 21 : 19 (IRVKN)
ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
ಅರಣ್ಯಕಾಂಡ 21 : 20 (IRVKN)
ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
ಅರಣ್ಯಕಾಂಡ 21 : 21 (IRVKN)
ಸೀಹೋನ್, ಓಗ್ ಅರಸರ ಸೋಲು ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
ಅರಣ್ಯಕಾಂಡ 21 : 22 (IRVKN)
“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
ಅರಣ್ಯಕಾಂಡ 21 : 23 (IRVKN)
ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
ಅರಣ್ಯಕಾಂಡ 21 : 24 (IRVKN)
ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
ಅರಣ್ಯಕಾಂಡ 21 : 25 (IRVKN)
ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
ಅರಣ್ಯಕಾಂಡ 21 : 26 (IRVKN)
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
ಅರಣ್ಯಕಾಂಡ 21 : 27 (IRVKN)
ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
ಅರಣ್ಯಕಾಂಡ 21 : 28 (IRVKN)
ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
ಅರಣ್ಯಕಾಂಡ 21 : 29 (IRVKN)
ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
ಅರಣ್ಯಕಾಂಡ 21 : 30 (IRVKN)
ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ನಾವು ಕಲ್ಲೆಸೆದು ಅವರೆಲ್ಲರನ್ನು ಕೊಂದೆವು. ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
ಅರಣ್ಯಕಾಂಡ 21 : 31 (IRVKN)
ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
ಅರಣ್ಯಕಾಂಡ 21 : 32 (IRVKN)
ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
ಅರಣ್ಯಕಾಂಡ 21 : 33 (IRVKN)
ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
ಅರಣ್ಯಕಾಂಡ 21 : 34 (IRVKN)
ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
ಅರಣ್ಯಕಾಂಡ 21 : 35 (IRVKN)
ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35