ಅರಣ್ಯಕಾಂಡ 24 : 1 (IRVKN)
ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
ಅರಣ್ಯಕಾಂಡ 24 : 2 (IRVKN)
ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,
ಅರಣ್ಯಕಾಂಡ 24 : 3 (IRVKN)
ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
ಅರಣ್ಯಕಾಂಡ 24 : 4 (IRVKN)
ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
ಅರಣ್ಯಕಾಂಡ 24 : 5 (IRVKN)
ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
ಅರಣ್ಯಕಾಂಡ 24 : 6 (IRVKN)
ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
ಅರಣ್ಯಕಾಂಡ 24 : 7 (IRVKN)
ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
ಅರಣ್ಯಕಾಂಡ 24 : 8 (IRVKN)
ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.
ಅರಣ್ಯಕಾಂಡ 24 : 9 (IRVKN)
ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
ಅರಣ್ಯಕಾಂಡ 24 : 10 (IRVKN)
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
ಅರಣ್ಯಕಾಂಡ 24 : 11 (IRVKN)
ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
ಅರಣ್ಯಕಾಂಡ 24 : 12 (IRVKN)
ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
ಅರಣ್ಯಕಾಂಡ 24 : 13 (IRVKN)
‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
ಅರಣ್ಯಕಾಂಡ 24 : 14 (IRVKN)
ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.
ಅರಣ್ಯಕಾಂಡ 24 : 15 (IRVKN)
ಬಿಳಾಮನ ನಾಲ್ಕನೆಯ ದೈವವಾಣಿ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
ಅರಣ್ಯಕಾಂಡ 24 : 16 (IRVKN)
ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
ಅರಣ್ಯಕಾಂಡ 24 : 17 (IRVKN)
ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು * ಅಥವಾ ಮೋವಾಬ್ಯರ ಹಣೆ. ಅಕ್ಷರಶಃವಾಗಿ ಮೋವಾಬ್ಯರ ಮೇರೆ. ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಕಲಹ ಉಂಟುಮಾಡುವವರನ್ನು. ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
ಅರಣ್ಯಕಾಂಡ 24 : 18 (IRVKN)
ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
ಅರಣ್ಯಕಾಂಡ 24 : 19 (IRVKN)
ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು. ಬಿಳಾಮನ ಅಂತಿಮ ದೈವವಾಣಿ
ಅರಣ್ಯಕಾಂಡ 24 : 20 (IRVKN)
20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
ಅರಣ್ಯಕಾಂಡ 24 : 21 (IRVKN)
21 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
ಅರಣ್ಯಕಾಂಡ 24 : 22 (IRVKN)
ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”
ಅರಣ್ಯಕಾಂಡ 24 : 23 (IRVKN)
ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
ಅರಣ್ಯಕಾಂಡ 24 : 24 (IRVKN)
ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
ಅರಣ್ಯಕಾಂಡ 24 : 25 (IRVKN)
25 ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25