ಅರಣ್ಯಕಾಂಡ 25 : 1 (IRVKN)
ಮೋವಾಬ್ ಸ್ತ್ರೀಯರು ಇಸ್ರಾಯೇಲರನ್ನು ದ್ರೋಹಿಗಳನ್ನಾಗಿ ಮಾಡಿದ್ದು ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.
ಅರಣ್ಯಕಾಂಡ 25 : 2 (IRVKN)
ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
ಅರಣ್ಯಕಾಂಡ 25 : 3 (IRVKN)
ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
ಅರಣ್ಯಕಾಂಡ 25 : 4 (IRVKN)
ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ * ಅಥವಾ ಸೂರ್ಯನ ಬೆಳಕಿನಲ್ಲಿ. ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
ಅರಣ್ಯಕಾಂಡ 25 : 5 (IRVKN)
ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 25 : 6 (IRVKN)
ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
ಅರಣ್ಯಕಾಂಡ 25 : 7 (IRVKN)
ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
ಅರಣ್ಯಕಾಂಡ 25 : 8 (IRVKN)
ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
ಅರಣ್ಯಕಾಂಡ 25 : 9 (IRVKN)
ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
ಅರಣ್ಯಕಾಂಡ 25 : 10 (IRVKN)
ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 25 : 11 (IRVKN)
“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
ಅರಣ್ಯಕಾಂಡ 25 : 12 (IRVKN)
ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.
ಅರಣ್ಯಕಾಂಡ 25 : 13 (IRVKN)
ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
ಅರಣ್ಯಕಾಂಡ 25 : 14 (IRVKN)
ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.
ಅರಣ್ಯಕಾಂಡ 25 : 15 (IRVKN)
ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.
ಅರಣ್ಯಕಾಂಡ 25 : 16 (IRVKN)
ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 25 : 17 (IRVKN)
“ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.
ಅರಣ್ಯಕಾಂಡ 25 : 18 (IRVKN)
ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”
❮
❯
1
2
3
4
5
6
7
8
9
10
11
12
13
14
15
16
17
18