ಅರಣ್ಯಕಾಂಡ 28 : 1 (IRVKN)
{ದೈನಿಕ ಯಜ್ಞಸಮರ್ಪಣೆಗಳು} [PS] ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 28 : 2 (IRVKN)
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
ಅರಣ್ಯಕಾಂಡ 28 : 3 (IRVKN)
ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
ಅರಣ್ಯಕಾಂಡ 28 : 4 (IRVKN)
ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 28 : 5 (IRVKN)
ನೀವು ಧಾನ್ಯನೈವೇದ್ಯಕ್ಕಾಗಿ [* ಸುಮಾರು ಒಂದು ಕಿಲೋಗ್ರಾಂ.] ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
ಅರಣ್ಯಕಾಂಡ 28 : 6 (IRVKN)
ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
ಅರಣ್ಯಕಾಂಡ 28 : 7 (IRVKN)
ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.
ಅರಣ್ಯಕಾಂಡ 28 : 8 (IRVKN)
ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು. [PS]
ಅರಣ್ಯಕಾಂಡ 28 : 9 (IRVKN)
{ಸಬ್ಬತ್ ದಿನದ ಯಜ್ಞಸಮರ್ಪಣೆ} [PS] “ ‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
ಅರಣ್ಯಕಾಂಡ 28 : 10 (IRVKN)
ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು. [PS]
ಅರಣ್ಯಕಾಂಡ 28 : 11 (IRVKN)
{ಮಾಸಿಕ ಯಜ್ಞಸಮರ್ಪಣೆ} [PS] “ ‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
ಅರಣ್ಯಕಾಂಡ 28 : 12 (IRVKN)
ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
ಅರಣ್ಯಕಾಂಡ 28 : 13 (IRVKN)
ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
ಅರಣ್ಯಕಾಂಡ 28 : 14 (IRVKN)
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
ಅರಣ್ಯಕಾಂಡ 28 : 15 (IRVKN)
ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. [PS]
ಅರಣ್ಯಕಾಂಡ 28 : 16 (IRVKN)
{ಪಸ್ಕ ಹಬ್ಬದ ಯಜ್ಞಸಮರ್ಪಣೆ} [PS] “ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
ಅರಣ್ಯಕಾಂಡ 28 : 17 (IRVKN)
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
ಅರಣ್ಯಕಾಂಡ 28 : 18 (IRVKN)
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
ಅರಣ್ಯಕಾಂಡ 28 : 19 (IRVKN)
ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
ಅರಣ್ಯಕಾಂಡ 28 : 20 (IRVKN)
ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
ಅರಣ್ಯಕಾಂಡ 28 : 21 (IRVKN)
ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,
ಅರಣ್ಯಕಾಂಡ 28 : 22 (IRVKN)
ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
ಅರಣ್ಯಕಾಂಡ 28 : 23 (IRVKN)
ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
ಅರಣ್ಯಕಾಂಡ 28 : 24 (IRVKN)
ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
ಅರಣ್ಯಕಾಂಡ 28 : 25 (IRVKN)
ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. [PS]
ಅರಣ್ಯಕಾಂಡ 28 : 26 (IRVKN)
{ಸುಗ್ಗಿ ಹಬ್ಬದ ಯಜ್ಞಸಮರ್ಪಣೆ} [PS] “ ‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
ಅರಣ್ಯಕಾಂಡ 28 : 27 (IRVKN)
ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
ಅರಣ್ಯಕಾಂಡ 28 : 28 (IRVKN)
ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,
ಅರಣ್ಯಕಾಂಡ 28 : 29 (IRVKN)
ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,
ಅರಣ್ಯಕಾಂಡ 28 : 30 (IRVKN)
ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
ಅರಣ್ಯಕಾಂಡ 28 : 31 (IRVKN)
ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’ ” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: