ಅರಣ್ಯಕಾಂಡ 29 : 1 (IRVKN)
ತುತ್ತೂರಿಗಳ ಹಬ್ಬದ ಯಜ್ಞಸಮರ್ಪಣೆ “ ‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
ಅರಣ್ಯಕಾಂಡ 29 : 2 (IRVKN)
ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
ಅರಣ್ಯಕಾಂಡ 29 : 3 (IRVKN)
ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,
ಅರಣ್ಯಕಾಂಡ 29 : 4 (IRVKN)
ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,
ಅರಣ್ಯಕಾಂಡ 29 : 5 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.
ಅರಣ್ಯಕಾಂಡ 29 : 6 (IRVKN)
ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.
ಅರಣ್ಯಕಾಂಡ 29 : 7 (IRVKN)
ದೋಷಪರಿಹಾರಕ ದಿನದ ಯಜ್ಞಸಮರ್ಪಣೆ “ ‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು * ಉಪವಾಸಾಚರಣೆ. ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆ ಸಭೆಕೂಡಬೇಕು.
ಅರಣ್ಯಕಾಂಡ 29 : 8 (IRVKN)
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
ಅರಣ್ಯಕಾಂಡ 29 : 9 (IRVKN)
ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,
ಅರಣ್ಯಕಾಂಡ 29 : 10 (IRVKN)
ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,
ಅರಣ್ಯಕಾಂಡ 29 : 11 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
ಅರಣ್ಯಕಾಂಡ 29 : 12 (IRVKN)
ಗುಡಾರ ಹಬ್ಬದ ಯಜ್ಞಸಮರ್ಪಣೆ “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
ಅರಣ್ಯಕಾಂಡ 29 : 13 (IRVKN)
ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,
ಅರಣ್ಯಕಾಂಡ 29 : 14 (IRVKN)
ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
ಅರಣ್ಯಕಾಂಡ 29 : 15 (IRVKN)
ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 16 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.
ಅರಣ್ಯಕಾಂಡ 29 : 17 (IRVKN)
“ ‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
ಅರಣ್ಯಕಾಂಡ 29 : 18 (IRVKN)
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,
ಅರಣ್ಯಕಾಂಡ 29 : 19 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 20 (IRVKN)
“ ‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,
ಅರಣ್ಯಕಾಂಡ 29 : 21 (IRVKN)
ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 22 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 23 (IRVKN)
“ ‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 24 (IRVKN)
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 25 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 26 (IRVKN)
“ ‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 27 (IRVKN)
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 28 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 29 (IRVKN)
“ ‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 30 (IRVKN)
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 31 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 32 (IRVKN)
“ ‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 33 (IRVKN)
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 34 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 35 (IRVKN)
“ ‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.
ಅರಣ್ಯಕಾಂಡ 29 : 36 (IRVKN)
ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 37 (IRVKN)
“ ‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
ಅರಣ್ಯಕಾಂಡ 29 : 38 (IRVKN)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 29 : 39 (IRVKN)
“ ‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’ ”
ಅರಣ್ಯಕಾಂಡ 29 : 40 (IRVKN)
ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40