ಅರಣ್ಯಕಾಂಡ 30 : 1 (IRVKN)
ಹರಕೆಯ ನಿಯಮಗಳು ಮತ್ತು ತೀರಿಸುವ ವಿಧಾನ ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,
ಅರಣ್ಯಕಾಂಡ 30 : 2 (IRVKN)
ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
ಅರಣ್ಯಕಾಂಡ 30 : 3 (IRVKN)
“ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ
ಅರಣ್ಯಕಾಂಡ 30 : 4 (IRVKN)
ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.
ಅರಣ್ಯಕಾಂಡ 30 : 5 (IRVKN)
ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
ಅರಣ್ಯಕಾಂಡ 30 : 6 (IRVKN)
“ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,
ಅರಣ್ಯಕಾಂಡ 30 : 7 (IRVKN)
ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
ಅರಣ್ಯಕಾಂಡ 30 : 8 (IRVKN)
ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
ಅರಣ್ಯಕಾಂಡ 30 : 9 (IRVKN)
ಅರಣ್ಯಕಾಂಡ 30 : 10 (IRVKN)
“ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು. “ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
ಅರಣ್ಯಕಾಂಡ 30 : 11 (IRVKN)
ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.
ಅರಣ್ಯಕಾಂಡ 30 : 12 (IRVKN)
ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
ಅರಣ್ಯಕಾಂಡ 30 : 13 (IRVKN)
ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
ಅರಣ್ಯಕಾಂಡ 30 : 14 (IRVKN)
ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.
ಅರಣ್ಯಕಾಂಡ 30 : 15 (IRVKN)
ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
ಅರಣ್ಯಕಾಂಡ 30 : 16 (IRVKN)
ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.

1 2 3 4 5 6 7 8 9 10 11 12 13 14 15 16