ಅರಣ್ಯಕಾಂಡ 31 : 1 (IRVKN)
{ಇಸ್ರಾಯೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು} [PS] ಯೆಹೋವನು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 31 : 2 (IRVKN)
“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು. [PE][PS]
ಅರಣ್ಯಕಾಂಡ 31 : 3 (IRVKN)
ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
ಅರಣ್ಯಕಾಂಡ 31 : 4 (IRVKN)
ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”
ಅರಣ್ಯಕಾಂಡ 31 : 5 (IRVKN)
ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು. [PE][PS]
ಅರಣ್ಯಕಾಂಡ 31 : 6 (IRVKN)
ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು. [PE][PS]
ಅರಣ್ಯಕಾಂಡ 31 : 7 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.
ಅರಣ್ಯಕಾಂಡ 31 : 8 (IRVKN)
ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು. [PE][PS]
ಅರಣ್ಯಕಾಂಡ 31 : 9 (IRVKN)
ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.
ಅರಣ್ಯಕಾಂಡ 31 : 10 (IRVKN)
ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.
ಅರಣ್ಯಕಾಂಡ 31 : 11 (IRVKN)
ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.
ಅರಣ್ಯಕಾಂಡ 31 : 12 (IRVKN)
ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು. [PE][PS]
ಅರಣ್ಯಕಾಂಡ 31 : 13 (IRVKN)
ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು. [PE][PS]
ಅರಣ್ಯಕಾಂಡ 31 : 14 (IRVKN)
ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು. [PE][PS]
ಅರಣ್ಯಕಾಂಡ 31 : 15 (IRVKN)
ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?
ಅರಣ್ಯಕಾಂಡ 31 : 16 (IRVKN)
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
ಅರಣ್ಯಕಾಂಡ 31 : 17 (IRVKN)
ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.
ಅರಣ್ಯಕಾಂಡ 31 : 18 (IRVKN)
ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.
ಅರಣ್ಯಕಾಂಡ 31 : 19 (IRVKN)
ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
ಅರಣ್ಯಕಾಂಡ 31 : 20 (IRVKN)
ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು. [PE][PS]
ಅರಣ್ಯಕಾಂಡ 31 : 21 (IRVKN)
ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,
ಅರಣ್ಯಕಾಂಡ 31 : 22 (IRVKN)
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
ಅರಣ್ಯಕಾಂಡ 31 : 23 (IRVKN)
ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.
ಅರಣ್ಯಕಾಂಡ 31 : 24 (IRVKN)
ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು. [PS]
ಅರಣ್ಯಕಾಂಡ 31 : 25 (IRVKN)
{ಕೊಳ್ಳೆಹೊಡೆದವುಗಳ ಹಂಚಿಕೆ} [PS] ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 31 : 26 (IRVKN)
“ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
ಅರಣ್ಯಕಾಂಡ 31 : 27 (IRVKN)
ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.
ಅರಣ್ಯಕಾಂಡ 31 : 28 (IRVKN)
ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.
ಅರಣ್ಯಕಾಂಡ 31 : 29 (IRVKN)
ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
ಅರಣ್ಯಕಾಂಡ 31 : 30 (IRVKN)
ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 31 : 31 (IRVKN)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು. [PE][PS]
ಅರಣ್ಯಕಾಂಡ 31 : 32 (IRVKN)
ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000, [PE][PS]
ಅರಣ್ಯಕಾಂಡ 31 : 33 (IRVKN)
ದನಗಳು - 72,000, [PE][PS]
ಅರಣ್ಯಕಾಂಡ 31 : 34 (IRVKN)
ಕತ್ತೆಗಳು - 61,000, [PE][PS]
ಅರಣ್ಯಕಾಂಡ 31 : 35 (IRVKN)
ಕನ್ಯೆಯರು - 32,000. [PE][PS]
ಅರಣ್ಯಕಾಂಡ 31 : 36 (IRVKN)
ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. [PE][PS]
ಅರಣ್ಯಕಾಂಡ 31 : 37 (IRVKN)
ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675. [PE][PS]
ಅರಣ್ಯಕಾಂಡ 31 : 38 (IRVKN)
ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72. [PE][PS]
ಅರಣ್ಯಕಾಂಡ 31 : 39 (IRVKN)
ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61
ಅರಣ್ಯಕಾಂಡ 31 : 40 (IRVKN)
16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
ಅರಣ್ಯಕಾಂಡ 31 : 41 (IRVKN)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು. [PE][PS]
ಅರಣ್ಯಕಾಂಡ 31 : 42 (IRVKN)
ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಹಂಚಿದ ಅರ್ಧ ಭಾಗದ
ಅರಣ್ಯಕಾಂಡ 31 : 43 (IRVKN)
ಎಷ್ಟೆಂದರೆ - 3,37,500 ಆಡುಕುರಿಗಳು. [PE][PS]
ಅರಣ್ಯಕಾಂಡ 31 : 44 (IRVKN)
ಎತ್ತುಗಳು - 36,000, [PE][PS]
ಅರಣ್ಯಕಾಂಡ 31 : 45 (IRVKN)
ಕತ್ತೆಗಳು - 30,500, [PE][PS]
ಅರಣ್ಯಕಾಂಡ 31 : 46 (IRVKN)
ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು. [PE][PS]
ಅರಣ್ಯಕಾಂಡ 31 : 47 (IRVKN)
ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. [PE][PS]
ಅರಣ್ಯಕಾಂಡ 31 : 48 (IRVKN)
ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,
ಅರಣ್ಯಕಾಂಡ 31 : 49 (IRVKN)
“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
ಅರಣ್ಯಕಾಂಡ 31 : 50 (IRVKN)
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
ಅರಣ್ಯಕಾಂಡ 31 : 51 (IRVKN)
ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು. [PE][PS]
ಅರಣ್ಯಕಾಂಡ 31 : 52 (IRVKN)
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
ಅರಣ್ಯಕಾಂಡ 31 : 53 (IRVKN)
ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.
ಅರಣ್ಯಕಾಂಡ 31 : 54 (IRVKN)
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು. [PE]
❮
❯