ಅರಣ್ಯಕಾಂಡ 32 : 1 (IRVKN)
{ಯೊರ್ದನ್ ನದಿಯ ಮೂಡಣ ದಿಕ್ಕಿನ ಕುಲಗಳು} [PS] ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
ಅರಣ್ಯಕಾಂಡ 32 : 2 (IRVKN)
ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,
ಅರಣ್ಯಕಾಂಡ 32 : 3 (IRVKN)
“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
ಅರಣ್ಯಕಾಂಡ 32 : 4 (IRVKN)
ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.
ಅರಣ್ಯಕಾಂಡ 32 : 5 (IRVKN)
ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು. [PE][PS]
ಅರಣ್ಯಕಾಂಡ 32 : 6 (IRVKN)
ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?
ಅರಣ್ಯಕಾಂಡ 32 : 7 (IRVKN)
ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?
ಅರಣ್ಯಕಾಂಡ 32 : 8 (IRVKN)
ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
ಅರಣ್ಯಕಾಂಡ 32 : 9 (IRVKN)
ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.
ಅರಣ್ಯಕಾಂಡ 32 : 10 (IRVKN)
ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,
ಅರಣ್ಯಕಾಂಡ 32 : 11 (IRVKN)
‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
ಅರಣ್ಯಕಾಂಡ 32 : 12 (IRVKN)
ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’ ” ಎಂದು ಖಂಡಿತವಾಗಿ ಹೇಳಿದನು. [PE][PS]
ಅರಣ್ಯಕಾಂಡ 32 : 13 (IRVKN)
ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
ಅರಣ್ಯಕಾಂಡ 32 : 14 (IRVKN)
“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
ಅರಣ್ಯಕಾಂಡ 32 : 15 (IRVKN)
ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು. [PE][PS]
ಅರಣ್ಯಕಾಂಡ 32 : 16 (IRVKN)
ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
ಅರಣ್ಯಕಾಂಡ 32 : 17 (IRVKN)
ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
ಅರಣ್ಯಕಾಂಡ 32 : 18 (IRVKN)
ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
ಅರಣ್ಯಕಾಂಡ 32 : 19 (IRVKN)
ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು. [PE][PS]
ಅರಣ್ಯಕಾಂಡ 32 : 20 (IRVKN)
ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,
ಅರಣ್ಯಕಾಂಡ 32 : 21 (IRVKN)
ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ
ಅರಣ್ಯಕಾಂಡ 32 : 22 (IRVKN)
ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು. [PE][PS]
ಅರಣ್ಯಕಾಂಡ 32 : 23 (IRVKN)
“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
ಅರಣ್ಯಕಾಂಡ 32 : 24 (IRVKN)
ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.
ಅರಣ್ಯಕಾಂಡ 32 : 25 (IRVKN)
ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.
ಅರಣ್ಯಕಾಂಡ 32 : 26 (IRVKN)
ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.
ಅರಣ್ಯಕಾಂಡ 32 : 27 (IRVKN)
ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು. [PE][PS]
ಅರಣ್ಯಕಾಂಡ 32 : 28 (IRVKN)
ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.
ಅರಣ್ಯಕಾಂಡ 32 : 29 (IRVKN)
ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.
ಅರಣ್ಯಕಾಂಡ 32 : 30 (IRVKN)
ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು. [PE][PS]
ಅರಣ್ಯಕಾಂಡ 32 : 31 (IRVKN)
ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.
ಅರಣ್ಯಕಾಂಡ 32 : 32 (IRVKN)
ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು. [PE][PS]
ಅರಣ್ಯಕಾಂಡ 32 : 33 (IRVKN)
ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು. [PE][PS]
ಅರಣ್ಯಕಾಂಡ 32 : 34 (IRVKN)
ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
ಅರಣ್ಯಕಾಂಡ 32 : 35 (IRVKN)
ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,
ಅರಣ್ಯಕಾಂಡ 32 : 36 (IRVKN)
ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು. [PE][PS]
ಅರಣ್ಯಕಾಂಡ 32 : 37 (IRVKN)
ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
ಅರಣ್ಯಕಾಂಡ 32 : 38 (IRVKN)
ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
ಅರಣ್ಯಕಾಂಡ 32 : 39 (IRVKN)
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. [PE][PS]
ಅರಣ್ಯಕಾಂಡ 32 : 40 (IRVKN)
ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
ಅರಣ್ಯಕಾಂಡ 32 : 41 (IRVKN)
ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ [* ಇಬ್ರಿಯ ಪದ ಹವ್ವೋತ್ ಯಾಯೀರ್.] ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
ಅರಣ್ಯಕಾಂಡ 32 : 42 (IRVKN)
ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: