ಅರಣ್ಯಕಾಂಡ 33 : 1 (IRVKN)
{ಐಗುಪ್ತದೇಶದಿಂದ ಮೋವಾಬಿನವರೆಗಿನ ಪ್ರಯಾಣ} [PS] ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
ಅರಣ್ಯಕಾಂಡ 33 : 2 (IRVKN)
ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು. [PE][PS]
ಅರಣ್ಯಕಾಂಡ 33 : 3 (IRVKN)
ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
ಅರಣ್ಯಕಾಂಡ 33 : 4 (IRVKN)
ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು [* ಅಥವಾ ಐಗುಪ್ತ್ಯರ ದೇವತೆಗಳಿಗೆ ನ್ಯಾಯತೀರಿಸಿ ಅವುಗಳಿಗಿಂತ ತಾನು ಮಾತ್ರವೇ ಅತಿ ಶಕ್ತಿವಂತನಾದ ದೇವರು ಎಂದು ಯೆಹೋವನು ಸಾಬೀತುಪಡಿಸಿದನು.] ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು. [PE][PS]
ಅರಣ್ಯಕಾಂಡ 33 : 5 (IRVKN)
ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 6 (IRVKN)
ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 7 (IRVKN)
ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 8 (IRVKN)
ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 9 (IRVKN)
ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 10 (IRVKN)
ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 11 (IRVKN)
ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 12 (IRVKN)
ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 13 (IRVKN)
ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 14 (IRVKN)
ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ. [PE][PS]
ಅರಣ್ಯಕಾಂಡ 33 : 15 (IRVKN)
ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 16 (IRVKN)
ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 17 (IRVKN)
ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 18 (IRVKN)
ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 19 (IRVKN)
ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 20 (IRVKN)
ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 21 (IRVKN)
ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 22 (IRVKN)
ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 23 (IRVKN)
ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 24 (IRVKN)
ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 25 (IRVKN)
ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 26 (IRVKN)
ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 27 (IRVKN)
ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 28 (IRVKN)
ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 29 (IRVKN)
ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 30 (IRVKN)
ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 31 (IRVKN)
ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 32 (IRVKN)
ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 33 (IRVKN)
ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 34 (IRVKN)
ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 35 (IRVKN)
ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 36 (IRVKN)
ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. [PE][PS]
ಅರಣ್ಯಕಾಂಡ 33 : 37 (IRVKN)
ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 38 (IRVKN)
ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
ಅರಣ್ಯಕಾಂಡ 33 : 39 (IRVKN)
ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. [PE][PS]
ಅರಣ್ಯಕಾಂಡ 33 : 40 (IRVKN)
ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
ಅರಣ್ಯಕಾಂಡ 33 : 41 (IRVKN)
ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 42 (IRVKN)
ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 43 (IRVKN)
ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 44 (IRVKN)
ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 45 (IRVKN)
ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 46 (IRVKN)
ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 47 (IRVKN)
ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 48 (IRVKN)
ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 49 (IRVKN)
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು. [PS]
ಅರಣ್ಯಕಾಂಡ 33 : 50 (IRVKN)
{ಕಾನಾನ್ ದೇಶವನ್ನು ಹಂಚಿಕೊಂಡುವ ಬಗ್ಗೆ ಆಜ್ಞೆ} [PS] ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
ಅರಣ್ಯಕಾಂಡ 33 : 51 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,
ಅರಣ್ಯಕಾಂಡ 33 : 52 (IRVKN)
ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
ಅರಣ್ಯಕಾಂಡ 33 : 53 (IRVKN)
ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
ಅರಣ್ಯಕಾಂಡ 33 : 54 (IRVKN)
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
ಅರಣ್ಯಕಾಂಡ 33 : 55 (IRVKN)
ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
ಅರಣ್ಯಕಾಂಡ 33 : 56 (IRVKN)
ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’ ” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56

BG:

Opacity:

Color:


Size:


Font: