ಅರಣ್ಯಕಾಂಡ 34 : 1 (IRVKN)
ಕಾನಾನ್ ದೇಶದ ಮೇರೆಗಳು ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 34 : 2 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.
ಅರಣ್ಯಕಾಂಡ 34 : 3 (IRVKN)
ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.
ಅರಣ್ಯಕಾಂಡ 34 : 4 (IRVKN)
ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರಬೇಕು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
ಅರಣ್ಯಕಾಂಡ 34 : 5 (IRVKN)
ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.
ಅರಣ್ಯಕಾಂಡ 34 : 6 (IRVKN)
ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.
ಅರಣ್ಯಕಾಂಡ 34 : 7 (IRVKN)
ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ,
ಅರಣ್ಯಕಾಂಡ 34 : 8 (IRVKN)
ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.
ಅರಣ್ಯಕಾಂಡ 34 : 9 (IRVKN)
ಆ ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು.
ಅರಣ್ಯಕಾಂಡ 34 : 10 (IRVKN)
ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾಮಿಗೆ ಗುರುತು ಹಾಕಬೇಕು.
ಅರಣ್ಯಕಾಂಡ 34 : 11 (IRVKN)
ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.
ಅರಣ್ಯಕಾಂಡ 34 : 12 (IRVKN)
ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’ ” ಎಂದನು.
ಅರಣ್ಯಕಾಂಡ 34 : 13 (IRVKN)
ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
ಅರಣ್ಯಕಾಂಡ 34 : 14 (IRVKN)
ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ.
ಅರಣ್ಯಕಾಂಡ 34 : 15 (IRVKN)
ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”
ಅರಣ್ಯಕಾಂಡ 34 : 16 (IRVKN)
ಕಾನಾನ್ ದೇಶವನ್ನು ಹಂಚಿಕೊಡುವುದಕ್ಕೆ ನೇಮಿಸಲ್ಪಟ್ಟವರ ಹೆಸರುಗಳು ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 34 : 17 (IRVKN)
“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.
ಅರಣ್ಯಕಾಂಡ 34 : 18 (IRVKN)
ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.
ಅರಣ್ಯಕಾಂಡ 34 : 19 (IRVKN)
ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,
ಅರಣ್ಯಕಾಂಡ 34 : 20 (IRVKN)
ಸಿಮೆಯೋನ್ ಕುಲದಿಂದ ಅಮ್ಮಿಹೂದನ ಮಗ ಶೆಮೂವೇಲ್,
ಅರಣ್ಯಕಾಂಡ 34 : 21 (IRVKN)
ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,
ಅರಣ್ಯಕಾಂಡ 34 : 22 (IRVKN)
ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ಕುಲಾಧಿಪತಿ,
ಅರಣ್ಯಕಾಂಡ 34 : 23 (IRVKN)
ಯೋಸೇಫನ ವಂಶದವರಲ್ಲಿ: ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,
ಅರಣ್ಯಕಾಂಡ 34 : 24 (IRVKN)
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,
ಅರಣ್ಯಕಾಂಡ 34 : 25 (IRVKN)
ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫಾನ್ ಕುಲಾಧಿಪತಿ,
ಅರಣ್ಯಕಾಂಡ 34 : 26 (IRVKN)
ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟೀಯೇಲ್ ಕುಲಾಧಿಪತಿ,
ಅರಣ್ಯಕಾಂಡ 34 : 27 (IRVKN)
ಆಶೇರ್ ಕುಲದಿಂದ ಶೆಲೋಮಮೀಯ ಮಗ ಅಹೀಹೂದ್ ಕುಲಾಧಿಪತಿ,
ಅರಣ್ಯಕಾಂಡ 34 : 28 (IRVKN)
ನಫ್ತಾಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.”
ಅರಣ್ಯಕಾಂಡ 34 : 29 (IRVKN)
ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29